ಮನೆ ಅಪರಾಧ ತಮಿಳುನಾಡಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: 2 ವಾರದಲ್ಲಿ ಮೂರನೇ ಪ್ರಕರಣ

ತಮಿಳುನಾಡಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: 2 ವಾರದಲ್ಲಿ ಮೂರನೇ ಪ್ರಕರಣ

0

ಚೆನ್ನೈ(Chennai): ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ವಾರಗಳಲ್ಲಿ ಇದು 3ನೇ ಪ್ರಕರಣವಾಗಿದೆ.

ಆಕೆಯ ಕೋಣೆಯಲ್ಲಿ ಡೆತ್‌ ನೋಟ್‌ ಪತ್ತೆಯಾಗಿದ್ದು ಪೋಷಕರು ಐಎಎಸ್‌ ಮಾಡುವಂತೆ ಒತ್ತಡ ಹಾಕಿದ್ದರು. ಇದರಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲು ಮಾಡಲಾಗಿದ್ದು, ಮೃತದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.

ನಿನ್ನೆ ತಿರುವಳ್ಳೂರು ಜಿಲ್ಲೆಯ ಕಿಲಾಚೇರಿ ಹಾಸ್ಟೆಲ್‌ವೊಂದರಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 13 ರಂದು ವಸತಿ ಶಾಲೆಯಲ್ಲಿ 12 ನೇ ತರಗತಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಕಳೆದ ಎರಡು ವಾರಗಳಲ್ಲಿ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆಘಾತವನ್ನು ಉಂಟುಮಾಡಿದೆ. ವಿದ್ಯಾರ್ಥಿಗಳು ಇಂತಹ ಆಲೋಚನೆಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.

ಈ ಘಟನೆ ಖಂಡಿಸಿ ತಮಿಳುನಾಡಿನಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ.