Saval TV on YouTube
ಬೆಳಗಾವಿ(Belagavi): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆಯವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಧ್ಯಂತರ ವರದಿ ಸಲ್ಲಿಸಿದ್ದಾರೆ.
ಪಂಚಮಸಾಲಿ ಮೀಸಲು ಹೋರಾಟ ತಾರಕಕ್ಕೆ ಏರಿರುವ ಹಿನ್ನೆಲೆಯಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಹೀಗಾಗಿ ತರಾತುರಿಯಲ್ಲಿ ಮಧ್ಯಂತರ ವರದಿ ತರಿಸಿಕೊಂಡಿದೆ.
ಹನ್ನೆರಡು ಜಿಲ್ಲೆಗಳಲ್ಲಿ ಇನ್ನೂ ಅಧ್ಯಯನ ನಡೆಸುವುದು ಬಾಕಿ ಇದೆ ಎಂದು ಆಯೋಗ ಸ್ಪಷ್ಟಪಡಿಸಿದ್ದು, ಇದರ ಆಧಾರದ ಮೇಲೆ ಒಂದಿಷ್ಟು ಸಮಯ ವ್ಯಯಿಸುವ ತಂತ್ರವನ್ನು ರಾಜ್ಯ ಸರ್ಕಾರ ಅನುಸರಿಸುವ ಸಾಧ್ಯತೆಯಿದೆ.
ಪಂಚಮಸಾಲಿ ಮೀಸಲಿಗೆ ಆಗ್ರಹಿಸಿ ಸಮುದಾಯದ ಮುಖಂಡರು ಇಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಲಕ್ಷಾಂತರ ಜನರು ಭಾಗವಹಿಸುವ ಸಾಧ್ಯತೆ ಇದೆ.














