ಮನೆ ರಾಜ್ಯ ಏ.12 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ: ಕೆ.ಎಸ್.ಈಶ್ವರಪ್ಪ

ಏ.12 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ: ಕೆ.ಎಸ್.ಈಶ್ವರಪ್ಪ

0

ಶಿವಮೊಗ್ಗ: ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ. ಏಪ್ರಿಲ್ 12 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. 25 ಸಾವಿರ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಬೆಂಬಲಿಗರ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ,   ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಸೋಲಿನ ಭಯ ಶುರುವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿವೈ ವಿಜಯೇಂದ್ರ ಗೆಲುವಿಗಾಗಿ ಶಿಕಾರಿಪುರದ ಕ್ಷೇತ್ರದಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿದ್ದರು. ಹೀಗಾಗಿ ಕಾಂಗ್ರೆಸ್​ನಿಂದ ಡಮ್ಮಿ ಅಭ್ಯರ್ಥಿ ಹಾಕಿದ್ದರು. ಅದರಂತೆ ಹೊಂದಾಣಿಕೆ ಯಶಸ್ವಿಯಾಗಿದೆ. ಲೋಕಸಭೆ ಚುನಾವಣೆಗೂ ಸಚಿವ ಮಧು ಬಂಗಾರಪ್ಪ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು, ಆ ಪಕ್ಷದಿಂದ ಡಮ್ಮಿ ಅಭ್ಯರ್ಥಿ ಹಾಕಲಾಗಿದೆ. ಆದರೆ, ಈ ಬಾರಿ ಹೊಂದಾಣಿಕೆ ರಾಜಕಾರಣ ಯಶ್ವಿಯಾಗುವುದಿಲ್ಲ. ನಾನು 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದರು.

ನಾನು ಜೀವನದಲ್ಲಿ ಪಕ್ಷಾಂತರ ಮಾಡಿಲ್ಲ. ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿ ಬಿಜೆಪಿಗೆ ಅನ್ಯಾಯ ಮಾಡಿದ್ದರು. ಪಕ್ಷಕ್ಕೆ ಚಾಕು ಹಾಕಿ ಹೋಗಿದ್ದರು. ಪಕ್ಷ ಕಟ್ಟಿ ಕೇಲವ ಆರು ಕ್ಷೇತ್ರಗಳನ್ನಷ್ಟೇ ಗೆದ್ದಿದ್ದರು. ಅಂದು ನಾವು (ಬಿಜೆಪಿ) 46 ಸ್ಥಾನ ಗೆದ್ದಿದ್ದೆವು ಎಂದರು.

ದುಡ್ಡು ಜಾತಿಯ ಆಟ ಚುನಾವಣೆಯಲ್ಲಿ ನಡೆಯುವುದಿಲ್ಲ. 60 ಸಾವಿರ ಲೀಡ್ ಕೊಡುತ್ತಿದ್ದ ಶಿಕಾರಿಪುರ ಕ್ಷೇತ್ರ ಈಗ 11 ಸಾವಿರಕ್ಕೆ ಕುಸಿದಿದೆ. ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ತಿಣುಕಾಡಿ ಗೆದ್ದರು. ಶಿಕಾರಿಪುರ ಕ್ಷೇತ್ರದಲ್ಲಿ ಅಪ್ಪ ಮಕ್ಕಳದ್ದು ವಿಚಿತ್ರ ರಾಜಕಾರಣ. ಯಡಿಯೂರಪ್ಪ, ಮಕ್ಕಳು ರಾಜ್ಯದ ಜನರಿಗೆ ಮೋಸ ಮಾಡಿದ್ದಾರೆ ಎಂದು ಶಿಕಾರಿಪುರ ಕ್ಷೇತ್ರದ ಜನರು ನನಗೆ ಕರೆ ಮಾಡಿ ಹೇಳುತ್ತಿದ್ದಾರೆ. ಬೈಂದೂರು ಕ್ಷೇತ್ರದಲ್ಲಿ ಕಾರ್ಯಕರ್ತರಿಗೆ ಅಸಮಾಧಾನ ಇದೆ ಎಂದರು.

ಹಿಂದಿನ ಲೇಖನಪೇರೆಂಟ್ಸ್ ಹೇಗೆ ವರ್ತಿಸಬೇಕು ?: ಭಾಗ-1
ಮುಂದಿನ ಲೇಖನರಾಜಕೀಯಕ್ಕೆ ಬರಲು ಮೋದಿ ಅವರ ಕೆಲಸ ಪ್ರೇರಣೆ: ಬಿಜೆಪಿ ಅಭ್ಯರ್ಥಿ ಯದುವೀರ್