ಮನೆ ಕಾನೂನು ರಸ್ತೆ ಗುಂಡಿಗಳ ಸ್ಥಿತಿಗತಿ ಕುರಿತು 2 ದಿನಗಳಲ್ಲಿ ಹೈಕೋರ್ಟ್ ಗೆ ವರದಿ ಸಲ್ಲಿಕೆ: ಬಿಬಿಎಂಪಿ

ರಸ್ತೆ ಗುಂಡಿಗಳ ಸ್ಥಿತಿಗತಿ ಕುರಿತು 2 ದಿನಗಳಲ್ಲಿ ಹೈಕೋರ್ಟ್ ಗೆ ವರದಿ ಸಲ್ಲಿಕೆ: ಬಿಬಿಎಂಪಿ

0

ಬೆಂಗಳೂರು (Bengaluru): ಇನ್ನೆರಡು ದಿನಗಳ ಒಳಗಾಗಿ ರಸ್ತೆ ಗುಂಡಿಗಳ ಸ್ಥಿತಿಗತಿ ಕುರಿತು ಎರಡು ದಿನಗಳಲ್ಲಿ ಹೈಕೋರ್ಟ್ ಗೆ ವರದಿ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ) ರವೀಂದ್ರ ಪಿ.ಎನ್. ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿಯವರೆಗೆ 13,400 ಕ್ಕೂ ಹೆಚ್ಚು ಗುಂಡಿಗಳನ್ನು ಪತ್ತೆಯಾಗಿದ್ದು, ಈ ಪೈಕಿ ಇನ್ನೂ 1,500 ಗುಂಡಿ ಮುಚ್ಚುವುದು ಬಾಕಿ ಉಳಿದಿವೆ. ಪ್ರತಿದಿನ ಹೊಸದಾಗಿ ಗುಂಡಿಗಳು ಪತ್ತೆಯಾಗುತ್ತಿದ್ದು, ಗುಂಡಿ ಮುಚ್ಚುವ ಕಾರ್ಯ ನಿರಂತರವಾಗಿ ನಡಯುತ್ತಿದೆ. ರಸ್ತೆಗಳಲ್ಲಿ ಗುಂಡಿಗಳು ಕಂಡು ಬಂದರೆ ಸಂಬಂಧಪಟ್ಟ ಎಂಜಿನಿಯರ್ ಗೆ ನೋಟಿಸ್ ನೀಡಿ, ಅಮಾನತುಗೊಳಿಸಲಾಗುವುದು ಎಂದು ಹೇಳಿದರು.

ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚಬೇಕು. ಒಂದು ವೇಳೆ ವೈಜ್ಞಾನಿಕವಾಗಿ ಮುಚ್ಚದ ಗುಂಡಿಗಳು ಮತ್ತೆ ಸೃಷ್ಟಿಯಾದರೆ ಅಂತಹ ಗುತ್ತಿಗೆದಾರರಿಗೆ ಬಿಲ್ ಪಾವತಿಸುವುದಿಲ್ಲ. ಜೊತೆಗೆ ಗುಂಡಿಗಳನ್ನು ಮತ್ತೊಮ್ಮೆ ಮುಚ್ಚುವ ವೆಚ್ಚವನ್ನು ಗುತ್ತಿಗೆದಾರರೇ ಭರಿಸಬೇಕು ಎಂದು ತಿಳಿಸಿದರು.

ಪೈಥಾನ್ ಯಂತ್ರದಿಂದ ಗುಂಡಿ ಮುಚ್ಚುವ ವಿಚಾರದಲ್ಲಿ ಗುತ್ತಿಗೆದಾರರ ಮೇಲೆ ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಹಲ್ಲೆ ಮಾಡಿದ್ದಾರೆಂಬ ಆರೋಪ ಕುರಿತಂತೆ ಇನ್ನೆರಡು ದಿನಗಳಲ್ಲಿ ಮುಖ್ಯ ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು. ಈಗಾಗಲೇ ಎಲ್ಲಾ ವಿಚಾರಣೆ ನಡೆಸಲಾಗಿದೆ ಎಂದರು.

ಹಿಂದಿನ ಲೇಖನಜಾವೆಲಿನ್‌ ಪಟು ನೀರಜ್‌ ಚೋಪ್ರಾಗೆ ಫಿನ್ಲೆಂಡ್‌ ಸ್ಪರ್ಧೆಯಲ್ಲಿ ಬೆಳ್ಳಿ
ಮುಂದಿನ ಲೇಖನಕರ್ನಾಟಕ ಲೋಕಾಯುಕ್ತರಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್‌ ಪ್ರಮಾಣ ವಚನ ಸ್ವೀಕಾರ