ಸುಬ್ರಹ್ಮಣ್ಯ: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲಾಗಿದೆ.
ಬಳ್ಪ ಗ್ರಾಮದ ರಮೇಶ್ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ರಮೇಶ್ ಹಾಗೂ ಅವರ ಪತ್ನಿ ಸಣ್ಣ ಮಗನೊಂದಿಗೆ ಬಳ್ಪದಲ್ಲಿ ವಾಸವಾಗಿದ್ದು, ಮಾ. 26ರಂದು ಸಂಜೆ ಮನೆಯಲ್ಲಿರುವಾಗ ಅವರ ಸಂಬಂಧಿ ಸುಂದರ ಹೊಸ್ಮಠ ಅವರು ಮನೆಗೆ ಬಂದಿದ್ದು, ಕುಳಿತುಕೊಂಡು ಜೋರಾಗಿ ಮಾತನಾಡುತ್ತಿದ್ದರು.
ಈ ವೇಳೆ ರಮೇಶ್ ಅವರು ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದ್ದು, ಇದರಿಂದ ಕುಪಿತಗೊಂಡ ಸುಂದರ ಅವರು ಕತ್ತಿಯಿಂದ ರಮೇಶ್ ಅವರಿಗೆ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಗಾಯಗೊಂಡ ರಮೇಶ್ ಅವರು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Saval TV on YouTube