ಮನೆ ಸುದ್ದಿ ಜಾಲ ಸ್ವ-ಪ್ರಯತ್ನ, ಶ್ರದ್ಧೆಯಿಂದ ಯಶಸ್ಸು ಸಾಧ್ಯ: ಡಾ. ರಮೇಶ್ ನರಸಯ್ಯ

ಸ್ವ-ಪ್ರಯತ್ನ, ಶ್ರದ್ಧೆಯಿಂದ ಯಶಸ್ಸು ಸಾಧ್ಯ: ಡಾ. ರಮೇಶ್ ನರಸಯ್ಯ

0

ಮೈಸೂರು(Mysuru): ಸ್ವಪ್ರಯತ್ನ ಯಾವತ್ತೂ ವ್ಯರ್ಥವಾಗುವುದಿಲ್ಲ. ನಿಮ್ಮ ಕೆಲಸವನ್ನು ಸ್ವ ಪ್ರಯತ್ನ ಹಾಗೂ ಶ್ರದ್ಧೆಯಿಂದ ಮಾಡಿದರೆ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯವಾಗುತ್ತದೆ ಎಂದು ಮೈಸೂರು ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರಾದ ಡಾ. ರಮೇಶ್ ನರಸಯ್ಯ ತಿಳಿಸಿದರು.

ಇಂದು ಪೀಪಲ್ಸ್ ಪಾರ್ಕ್’ನ ಕೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.

ನಗರದ ಕೇಂದ್ರ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಎಲ್ಲಾ ಪುಸ್ತಕಗಳು, ಕಂಪ್ಯೂಟರ್‌’ಗಳು ಹಾಗೂ ಸ್ಮಾರ್ಟ್ ಕ್ಲಾಸ್ ರೂಮ್‌’ಗಳು ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಇದ್ದು ಇದರ ಸಂಪೂರ್ಣ ಸದುಪಯೋಗ ಮಾಡಿಕೊಂಡು ಪರೀಕ್ಷೆಗಳಲ್ಲಿ ಯಶಸ್ಸು ಕಾಣಬೇಕು. ಬೇರೆಯಲ್ಲೂ ಈ ರೀತಿಯ ಸೌಲಭ್ಯಗಳು ಸಿಗುವುದಿಲ್ಲ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಂತರ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಗ್ರಂಥಾಲಯದಲ್ಲಿ ಎಲ್ಲಾ ರೀತಿಯ ಸೌಲಭ್ಯಗಳು ಇದ್ದು ಸ್ಪರ್ಧಾತ್ಮಕ ಪರೀಕ್ಷೆಗೆ ಪೂರಕವಾಗಿ ಯಶಸ್ಸುಗಳಿಸುವ ವಾತಾವರಣ ಇದೆ. ಕೆಎಎಸ್ ಹಾಗೂ ಐಎಎಸ್ ಪರೀಕ್ಷೆಗೆ ತಯಾರಿ ನಡೆಸಲು ಬೆಂಗಳೂರು ದೆಹಲಿಗೆ ಹೋಗುವ ಸಂದರ್ಭದಲ್ಲಿ ಈ ಗ್ರಂಥಾಲಯವನ್ನು ವೀಕ್ಷಣೆ ಮಾಡಿದಾಗ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಸೌಲಭ್ಯಗಳು ಇಲ್ಲಿ ಇರುವುದು ತುಂಬಾ ಸಂತೋಷದ ವಿಷಯ ಎಂದು ತಿಳಿಸಿದರು.

ಗ್ರಂಥಾಲಯದಲ್ಲಿ ಉತ್ತಮವಾಗಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಿರುವುದು ವಿದ್ಯಾರ್ಥಿಗಳು ಖಂಡಿತ ಪರೀಕ್ಷೆಯಲ್ಲಿ ಯಶಸ್ಸು ಪಡೆಯಬಹುದು. ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿ ಇರಬೇಕಾದರೆ ಯೋಗ ಮುಖ್ಯವಾಗಿದೆ. ಇದರಿಂದ ಏಕಾಗ್ರತೆ ಹೆಚ್ಚಾಗುತ್ತದೆ ಹಾಗೂ ಆರೋಗ್ಯವಾದ ದೇಹವಿರುವುದು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್, ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾಗುವ ವಿಷಯಾಧಾರಿತ ಪುಸ್ತಕಗಳು ಲಭ್ಯವಿದ್ದು, ವಿದ್ಯಾರ್ಥಿಗಳು ಶ್ರದ್ಧೆ ಹಾಗೂ ಸಮಯಪ್ರಜ್ಙೆಯನ್ನು ಪಾಲಿಸಿ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್ ಪಬ್ಲಿಕ್ ಶಾಲೆಯ ನಿವೃತ್ತ ನಿರ್ದೇಶಕರಾದ ಸಿ.ವಿ.ನಾಗರಾಜ್, ರಾಜ್ಯ ನಗರಾಭಿವೃದ್ಧಿ ತರಬೇತಿ ಸಂಸ್ಥೆಯ ಉಪ ನಿರ್ದೇಶಕರಾದ ಸಿ.ರಾಜು, ಶಿಕ್ಷಣ ತಜ್ಙರಾದ ಬಿ.ಆರ್.ಅರುಣ್, ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ನಿವೃತ್ತ ಶಿಕ್ಷಕರಾದ ರವೀಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.