ಮನೆ ರಾಜ್ಯ ಚಂದ್ರಯಾನ-3 ಯಶಸ್ವಿ ಉಡಾವಣೆ: ಭಾರತಕ್ಕೆ ಹೆಮ್ಮೆಯ ಕ್ಷಣ- ಸಿಎಂ ಸಿದ್ದರಾಮಯ್ಯ

ಚಂದ್ರಯಾನ-3 ಯಶಸ್ವಿ ಉಡಾವಣೆ: ಭಾರತಕ್ಕೆ ಹೆಮ್ಮೆಯ ಕ್ಷಣ- ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಚಂದ್ರಯಾನ-3 ಮಿಷನ್‌ ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

Join Our Whatsapp Group

ಯಶಸ್ವಿ ಉಡಾವಣೆಗಾಗಿ  ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು ಅಭಿನಂದಿಸಿದ್ದಾರೆ.

ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆಯನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ಯಶಸ್ವಿ ಉಡಾವಣೆ ಮಾಡಲಾಗಿದೆ. ಉಡಾವಣೆಯಾಗಿರುವ ನೌಕೆಯು ಚಂದ್ರನ ಮೇಲ್ಮೈ ತಲುಪಲು 42 ದಿನಗಳನ್ನು ತೆಗೆದುಕೊಳ್ಳಲಿದ್ದು, ಆಗಸ್ಟ್ 23 ಇಲ್ಲವೇ 24ರಂದು ಇಳಿಯಲಿದೆ.