ಬೆಂಗಳೂರು : ಅಧಿಕಾರ ಹಂಚಿಕೆ ಚರ್ಚೆ ನಡೆಯುತ್ತಿರುವಾಗಲೇ ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ ನಡೆದಿದ್ದು ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು ದೆಹಲಿಗೆ ಹಾರಿದ್ದಾರೆ.
ಸಚಿವ ಚೆಲುವರಾಯಸ್ವಾಮಿ, ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ, ಶಾಸಕ ರವಿ ಗಣಿಗ, ಶಾಸಕ ಉದಯ್ ಗೌಡ ಹೈಕಮಾಂಡ್ ಭೇಟಿಗೆ ತೆರಳಿದ್ದು ದೆಹಲಿಯಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.
ರಾಜ್ಯದ ಪ್ರಸಕ್ತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಚಿವ ಶಾಸಕರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿಗೆ ಸಮಯ ಕೇಳಿದ್ದಾರೆ. ಇವತ್ತು 8 ಜನರ ಒಂದು ತಂಡ ಪ್ರಯಾಣ ಬೆಳೆಸಿದರೆ ನಾಳೆ 7 ಜನರ ತಂಡ ದೆಹಲಿಗೆ ಪ್ರಯಾಣ ಬೆಳೆಸಲು ಪ್ಲ್ಯಾನ್ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.














