ಮನೆ ರಾಜ್ಯ ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಕಬ್ಬಿನ ದರ ನಿಗದಿ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಕಬ್ಬಿನ ದರ ನಿಗದಿ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ

0

ಬೆಂಗಳೂರು(Bengaluru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಪ್ರಸಕ್ತ ಹಂಗಾಮಿನ ಕಬ್ಬಿನ ದರ ನಿಗದಿಯನ್ನು ಅಂತಿಮಗೊಳಿಸಲಾಗುವುದು ಎಂದು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.

ಕಬ್ಬುನ ದರ ನಿಗದಿಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಶನಿವಾರ ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಭೆ ನಡೆಸಿದ ಅವರು, ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳ ಅಭಿಪ್ರಾಯ ಆಲಿಸಿದರು.

ಬಳಿಕ ಮಾತಮಾಡಿದ ಅವರು, ಶನಿವಾರದ ಸಭೆಯ ವಿವರಗಳನ್ನು ಮುಖ್ಯಮಂತ್ರಿಯವರಿಗೆ ನೀಡಲಾಗುವುದು. ಅವರ ನೇತೃತ್ವದಲ್ಲಿ ಸಭೆ ನಡೆಸಿ ದರ ನಿಗದಿಪಡಿಸಲಾಗುವುದು ಎಂದರು.

ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು. ಕಟಾವು ಮತ್ತು ಸಾಗಣೆ ವೆಚ್ಚವನ್ನು ರೈತರಿಗೆ ಹೊರೆಯಾಗದಂತೆ ನಿದಿ ಮಾಡಬೇಕು. ಕಾರ್ಖಾನೆಗಳು ತೂಕದಲ್ಲಿ ಮಾಡುವ ಮೋಸವನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರೈತ ನಾಯಕಿ ಸುನಂದಾ ಜಯರಾಂ ಸೇರಿದಂತೆ ಹಲವು ರೈತ ಮುಖಂಡರು ಆಗ್ರಹಿಸಿದರು.

ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆ ಮಾಲೀಕರ ಸಂಘದ ಪ್ರತಿನಿಧಿ ಜಗದೀಶ ಗುಡುಗುಂಟಿ ಮಾತನಾಡಿ, ಕಾರ್ಖಾನೆಗಳಲ್ಲಿ ಉತ್ಪಾದನಾ ವೆಚ್ಚ ಹೆಚ್ಚಿದೆ. ಪ್ರತಿ ಟನ್ ಕಬ್ಬಿಗೆ ₹ 3,500ಕ್ಕಿಂತ ಹೆಚ್ಚು ದರ ನೀಡುವುದು ಅಸಾಧ್ಯ ಎಂದರು.

ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸಭೆ ಮುಕ್ತಾಯಗೊಳಿಸಿದ ಸಚಿವರು, ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ದರ ನಿಗದಿ ನಿರ್ಧಾರ ಕೈಗೊಳ್ಳುವುದಾಗಿ ಪ್ರಕಟಿಸಿದರು.

ಸರ್ಕಾರಕ್ಕೆ ದಿನಗಳ ಅಂತಿಮ ಗಡುವು:

ಕಬ್ಬುದರ ನಿಗದಿ ಸರ್ಕಾರಕ್ಕೆ 20 ರತನಕ ಐದು ದಿನಗಳ ಅಂತಿಮ ಗಡುವನ್ನು  ರೈತ ಮುಖಂಡರು ಸರ್ಕಾರಕ್ಕೆ ನೀಡಿದ್ದಾರೆ.

ಪಂಜಾಬ್ ರಾಜ್ಯದಲ್ಲಿ 3800 ಉತ್ತರ ಪ್ರದೇಶದಲ್ಲಿ 3500 ಗುಜರಾತ್ ನಲ್ಲಿ 4400 ದರ ನಿಗದಿ ಮಾಡಿದ್ದಾರೆ ರಾಜ್ಯ ಸರ್ಕಾರವು ಇದನ್ನು ಗಮನಿಸಿ ರಾಜ್ಯ ಸಲಹಾ ಬೆಲೆಯನ್ನ ನ್ಯಾಯಯುತವಾಗಿ ನಿಗದಿ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು

ಹಿಂದಿನ ಲೇಖನಹೈ ಬಿಪಿಯನ್ನು ಕಂಟ್ರೋಲ್ ಮಾಡುತ್ತೆ ಬೀಟ್ರೂಟ್ ಜ್ಯೂಸ್
ಮುಂದಿನ ಲೇಖನ‘ಡಿ 56’ ಚಿತ್ರೀಕರಣ ಪುನರಾರಂಭಿಸಿದ ನಟ ದರ್ಶನ್