ಬೆಂಗಳೂರು(Bengaluru): ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬಳು ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪವಿತ್ರಾ (23) ಆತ್ಮಹತ್ಯೆಗೆ ಶರಣಾದ ಯುವತಿ.
ನಗರದ ಸಂಸ್ಥೆಯೊಂದರಲ್ಲಿ ತರಬೇತಿ ಪಡೆಯಲು ಕೆಲ ತಿಂಗಳ ಹಿಂದೆ ಈಕೆ ಬೆಂಗಳೂರಿಗೆ ಬಂದಿದ್ದು, ಗೋವಿಂದರಾಜ ನಗರದಲ್ಲಿರುವ ಪೇಯಿಂಗ್ ಗೆಸ್ಟ್(ಪಿಜಿ)ಯಲ್ಲಿ ವಾಸವಿದ್ದಳು. ಭಾನುವಾರ ಮಧ್ಯಾಹ್ನ ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾಳೆ. ಸಂಜೆ ಸ್ನೇಹಿತೆಯರು ಬಂದಾಗ ಘಟನೆ ಬೆಳಕಿಗೆ ಬಂದಿದೆ.ಯುವತಿಯ ಸ್ನೇಹಿತೆಯರ ಹೇಳಿಕೆ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಗೋವಿಂದರಾಜ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.