ಮನೆ ರಾಜಕೀಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ

0

ಶಿಮ್ಲಾ: ಹಿಮಾಚಲ ಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಶನಿವಾರ ಪಕ್ಷ ಪ್ರಕಟಿಸಿದೆ.

ಉಪ ಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಅವರನ್ನು ಆಯ್ಕೆ ಮಾಡಲಾಗಿದೆ.

ಹಮೀರ್‌’ಪುರ್ ಜಿಲ್ಲೆಯ ನದೌನ್ ಕ್ಷೇತ್ರದ ಶಾಸಕರಾದ 58 ವರ್ಷದ ಸುಖು, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಶುಕ್ರವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುಖು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 68 ಕ್ಷೇತ್ರಗಳ ಪೈಕಿ 40ರಲ್ಲಿ ಜಯಿಸಿತ್ತು. ನವೆಂಬರ್ 12ರಂದು ನಡೆದ ಚುನಾವಣೆ ಫಲಿತಾಂಶ ಡಿಸೆಂಬರ್ 8ರಂದು ಪ್ರಕಟವಾಗಿತ್ತು.

ಹಿಮಾಚಲ ಪ್ರದೇಶದ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಸುಖು, ಕಾಂಗ್ರೆಸ್‌’ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.