ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ ಹಾಗೂ ಜಿಲ್ಲಾ ಬಾಲಭವನ ಸಮಿತಿ ಶಿವಮೊಗ್ಗ ಇವರುಗಳ ಸಹಯೋಗದೊಂದಿಗೆ ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಮೇ 12 ರಂದು ಕಾಶೀಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಏರ್ಪಡಿಸಲಾಗಿದೆ.
ಈ ಬೇಸಿಗೆ ಶಿಬಿರದಲ್ಲಿ 5 ರಿಂದ 15 ವರ್ಷದೊಳಗಿನ ಮಕ್ಕಳು ಪಾಲ್ಗೊಳಲು ಅವಕಾಶವಿದ್ದು, ನೃತ್ಯ, ಸಂಗೀತ, ಚಿತ್ರಕಲೆ ಮತ್ತು ಕರಕುಶಲ ಕಲೆ, ರಂಗ ಚಟುವಟಿಕೆಗಳಿರುತ್ತವೆ.
ಈ ಶಿಬಿರದಲ್ಲಿ ಪಾಲ್ಗೊಳಲು ಬಯಸುವವರು ಅರ್ಜಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಛೇರಿಯನ್ನು ಮತ್ತು ಬಾಲಭವನ ಕಾರ್ಯಕ್ರಮ ಸಂಯೋಜಕರಾದ ಮಂಜುಳ ಆರ್. ಮೊ.ಸಂ. 9353617934 ನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರ














