ಮನೆ ಕಾನೂನು ಸುನಂದಾ ಪುಷ್ಕರ್ ಸಾವಿನ ಪ್ರಕರಣ: ಶಶಿ ತರೂರ್ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದೆಹಲಿ ಪೊಲೀಸ್

ಸುನಂದಾ ಪುಷ್ಕರ್ ಸಾವಿನ ಪ್ರಕರಣ: ಶಶಿ ತರೂರ್ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದೆಹಲಿ ಪೊಲೀಸ್

0

ಪತ್ನಿ ಸುನಂದಾ ಪುಷ್ಕರ್ ಅವರ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಆರೋಪ ಮುಕ್ತಗೊಳಿಸಿದ ಒಂದು ವರ್ಷದ ಬಳಿಕ ದೆಹಲಿ ಪೊಲೀಸರು ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

[ದೆಹಲಿಯ ಎನ್ಸಿಟಿ ರಾಜ್ಯ ವರ್ಸಸ್ ಶಶಿ ತರೂರ್].

ಮೇಲ್ಮನವಿಯನ್ನು ಸಲ್ಲಿಸಲು ವಿಳಂಬವಾಗಿರುವುದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸಲ್ಲಿಸಿರುವ ವಿಳಂಬ ವಿನಾಯಿತಿ ಅರ್ಜಿಯ ವಿಚಾರವಾಗಿ ಶಶಿ ತರೂರ್ ಅವರಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು 2023ರ ಫೆಬ್ರವರಿ 7ಕ್ಕೆ ಮುಂದೂಡಿದೆ. 2014ರ ಜನವರಿಯಲ್ಲಿ ಸುನಂದಾ ಪುಷ್ಕರ್ ಅವರು ಹೊಟೆಲ್ ಕೊಠಡಿಯ ಒಳಗೆ ಶವವಾಗಿ ಪತ್ತೆಯಾಗಿದ್ದರು. ಪತ್ನಿಯ ಸಾವಿಗೆ ಕುಮ್ಮಕ್ಕು ನೀಡಿದ ಆರೋಪ ಶಶಿ ತರೂರ್ ಅವರ ಮೇಲಿತ್ತು.

ಮೊದಲಿಗೆ ಕೊಲೆ (ಐಪಿಸಿ ಸೆಕ್ಷನ್ 302) ಆರೋಪ ನಿಗದಿ ಮಾಡಿ ತನಿಖೆ ನಡೆಸಿದ್ದ ದೆಹಲಿ ಪೊಲೀಸರು ಬಳಿಕ ಶಶಿ ತರೂರ್ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಕುಮ್ಮಕ್ಕು) ಮತ್ತು 498ಎ (ಪತಿಯ ಕ್ರೌರ್ಯ) ಅಡಿ ಎಫ್’ಐಆರ್ ದಾಖಲಿಸಿದ್ದರು. 2021ರಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಶಿ ತರೂರ್ ಅವರನ್ನು ಖುಲಾಸೆಗೊಳಿಸಿತ್ತು.