ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ.
ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.
Saval TV on YouTube