ಕೊಲಂಬೊ (Colombo): ಶ್ರೀಲಂಕಾ ಮಾಜಿ ಪ್ರಧಾನಿ ಮಹೀಂದ್ರ ರಾಜಪಕ್ಸೆ ಮತ್ತು ಮಾಜಿ ಸಚಿವ ಬಸಿಲ್ ರಾಜಪಕ್ಸೆ ಅವರು ಜುಲೈ 28 ರವರೆಗೆ ದೇಶ ತೊರೆಯದಂತೆ ನಿರ್ಬಂಧ ವಿಧಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಗೋಟಬಯ ರಾಜಪಕ್ಸೆ ಅವರು ರಾಜೀನಾಮೆ ನೀಡಿದ ಮಾರನೇ ದಿನವೇ ಅವರ ಇಬ್ಬರು ಸಹೋದರರಿಗೆ ಬಿಕ್ಕಟ್ಟು ಪೀಡಿತ ದ್ವೀಪ ರಾಷ್ಟ್ರವನ್ನು ತೊರೆಯದಂತೆ ನಿರ್ಬಂಧಿಸಲಾಗಿದೆ.
ಈ ಇಬ್ಬರು ರಾಜಕಾರಣಿಗಳ ವಿರುದ್ಧ ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಶನಲ್ ಶ್ರೀಲಂಕಾ(ಟಿಐಎಸ್‌ಎಲ್) ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಮಧ್ಯಂತರ ಆದೇಶ ನೀಡಿದೆ.
ಗೋತಬಯ ರಾಜಪಕ್ಸೆ ಅವರ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ ನಂತರ ಪ್ರಧಾನಿ ರನಿಲ್ ವಿಕ್ರಮಸಿಂಘೆ ಶುಕ್ರವಾರ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.