ಮನೆ ಕಾನೂನು ಹಿಜಾಬ್ ವಿವಾದ: ತ್ವರಿತ ವಿಚಾರಣೆಗೆ ಸುಪ್ರೀಂ ನಕಾರ

ಹಿಜಾಬ್ ವಿವಾದ: ತ್ವರಿತ ವಿಚಾರಣೆಗೆ ಸುಪ್ರೀಂ ನಕಾರ

0

ನವದೆಹಲಿ: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ಶಾಲಿನ ವಿವಾದ ತಾರಕಕ್ಕೇರಿದ್ದು, ಈ ವಿವಾದಕ್ಕೆ ಸಂಬಂಧಿಸಿದಂತೆ ತ್ವರಿತ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರರಕ್ಕೇರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ , ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು.

ಆದರೆ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ, ಸದ್ಯ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್‌ನ ವಿಸ್ತೃತ ಪೀಠ ವಿಚಾರಣೆ ನಡೆಸಿ ಆದೇಶ ನೀಡಲಿ, ಆದೇಶದ ಬಳಿಕವೂ ಅಗತ್ಯ ಬಿದ್ದರೆ ಮುಂದೆ ನೋಡೋಣ, ಸದ್ಯ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿರುವುದು ವರದಿಯಾಗಿದೆ.

ಹಿಂದಿನ ಲೇಖನಹಿಜಾಬ್-ಕೇಸರಿ ಶಾಲು ವಿವಾದ: ಯಾವುದೇ ಹೇಳಿಕೆ ನೀಡದಂತೆ ಸ್ವಪಕ್ಷದವರಿಗೆ ಸಿಎಂ ಸೂಚನೆ
ಮುಂದಿನ ಲೇಖನನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಇಂದು ರಾಯಚೂರು ಬಂದ್