ನವದೆಹಲಿ: ಮಾಧ್ಯಮಗಳಿಗೆ ನೀಡಲಾಗಿರುವ ಸಂವಿಧಾನಬದ್ದ ವಾಕ್ ಸ್ವಾತಂತ್ರ್ಯ ಚಲಾಯಿಸಲು ಸಂಪೂರ್ಣ ಅವಕಾಶ ನೀಡಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಪತ್ರಕರ್ತರ ವಿರುದ್ಧ ಸುಖಾ ಸುಮ್ಮನೆ ಮಾನನನಷ್ಟ ಮೊಕದ್ದಮೆ ಹೂಡುವಂತಿಲ್ಲ ಎಂದು ಹೇಳಿದೆ.
ಪತ್ರಕರ್ತರೊಬ್ಬರು ಹಾಗೂ ಮಾಧ್ಯಮ ಸಂಸ್ಥೆಯೊಂದರ ಪರವಾಗಿ ಪಾಟ್ನ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿಯೊಂದನ್ನು ತಳ್ಳಿ ಹಾಕಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.