ಮನೆ ಕಾನೂನು ಡಿಸಿಎಂ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಡಿಸಿಎಂ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

0

ನವದೆಹಲಿ: ಕಾಂಗ್ರೆಸ್ ನಾಯಕ, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್  ವಿರುದ್ಧದ 2018ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಇದರಿಂದಾಗಿ ಈ ಪ್ರಕರಣವನ್ನು ಇನ್ನು ಮುಂದೆ PMLA ಅಡಿಯಲ್ಲಿ ತನಿಖೆ ಮಾಡಲಾಗುವುದಿಲ್ಲ.

ಈ ಪ್ರಕರಣ 2017ರ ಅಗಸ್ಟ್​​ನಲ್ಲಿ ದೆಹಲಿಯಲ್ಲಿ ಪತ್ತೆಯಾದ ನಗದು ಹಣಕ್ಕೆ ಸಂಬಂಧಿಸಿದ್ದಾಗಿದೆ. ಈ ಕುರಿತು ಅಕ್ರಮ ಹಣ ವರ್ಗಾವಣೆ ಸೆಕ್ಷನ್‌ಗಳ ಅಡಿಯಲ್ಲಿ ಇಡಿ ತನಿಖೆ ಆರಂಭಿಸಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್‌ನಿಂದ ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ಡಿಕೆಶಿ: ಹೈಕೋರ್ಟ್ ಆದೇಶದ ವಿರುದ್ಧ ಡಿಕೆ ಶಿವಕುಮಾರ್ ಅವರು ದೇಶದ ಅತ್ಯುನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. 2019 ರಲ್ಲಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಇಡಿ ಸಮನ್ಸ್ ಅನ್ನು ಪ್ರಶ್ನಿಸಿದ್ದರು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ತಪ್ಪು ಎಂದು ವಾದ ಮಂಡಿಸಿದ್ದರು. ಆದರೆ, ಡಿಕೆ ಶಿವಕುಮಾರ್ ಅವರ ವಾದವನ್ನು ಕರ್ನಾಟಕ ಹೈಕೋರ್ಟ್ ಒಪ್ಪಲಿಲ್ಲ ಮತ್ತು ಇಡಿ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿತ್ತು.