ಮನೆ ಕಾನೂನು 24 ಗಂಟೆಯೊಳಗೆ ರೋಹಿಣಿ ವಿರುದ್ಧ ಮಾಡಿದ್ದ ಸೋಷಿಯಲ್ ಮೀಡಿಯಾ ಪೋಸ್ಟ್ ಡಿಲಿಟ್ ಮಾಡುವಂತೆ ಡಿ.ರೂಪಾಗೆ ಸುಪ್ರೀಂ...

24 ಗಂಟೆಯೊಳಗೆ ರೋಹಿಣಿ ವಿರುದ್ಧ ಮಾಡಿದ್ದ ಸೋಷಿಯಲ್ ಮೀಡಿಯಾ ಪೋಸ್ಟ್ ಡಿಲಿಟ್ ಮಾಡುವಂತೆ ಡಿ.ರೂಪಾಗೆ ಸುಪ್ರೀಂ ಕೋರ್ಟ್ ಸೂಚನೆ

0

ನವದೆಹಲಿ: ಐಎಎಸ್ ಅಧಿಕಾರಿ ರೋಹಿನಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ರೂಪ ಮೌದ್ಗಲ್ ಮಾಡಿದ್ದ ಆಕ್ಷೇಪಾರ್ಹ ಸೋಷಿಯಲ್ ಮೀಡಿಯಾ ಪೋಸ್ಟ್ ಗಳನ್ನು ಡಿಲಿಟ್ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ನಾಳೆಯೊಳಗೆ ಐಎಎಸ್ ಅಧಿಕಾರಿ ರೋಹಿನಿ ಸಿಂಧೂರಿ ವಿರುದ್ಧ ಪೋಸ್ಟ್ ಮಾಡಿದ್ದ ಎಲ್ಲ ಪೋಸ್ಟ್ ಗಳು ಹಾಗೂ ಕಾಮೆಂಟ್ ಗಳನ್ನು ಡಿಲೀಡ್ ಮಾಡುವಂತೆ ಸುಪ್ರೀಂ ಕೋರ್ಟ್ ಮೌಖಿಕ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಹಾಗೂ ಪಂಕಜ್ ಮಿತ್ತಲ್ ಅವರನ್ನುಒಳಗೊಂಡ ಪೀಠ ಇಂದು ಮೇಲಿನ ಸೂಚನೆ ನೀಡಿದೆ. ಇತ್ತೀಚಿಗೆ ರಾಜ್ಯದಲ್ಲಿ ಈ ಇಬ್ಬರು ಅಧಿಕಾರಿಗಳ ವಾಗ್ವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಜತೆಗೆ ಸರಕಾರಕ್ಕೂ ಮುಜುಗರ ತಂದೊಡ್ಡಿತ್ತು.

ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಹಲವಾರು ಆರೋಪಗಳನ್ನು ಮಾಡಿದ್ದರು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಪೋಸ್ಟ್ ಗಳನ್ನು ಹಾಕಿದ್ದರು. ಈ ಕುರಿತು ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಇಬ್ಬರು ಅಧಿಕಾರಿಗಳು ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳುವಂತೆ ತಿಳಿಸಿತ್ತು. ಇದಾದ ವಿಫಲವಾದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ಖುದ್ದು ವಿಚಾರಣೆಗೆ ಹಾಜರಾಗಿದ್ದರು. ಇದಾದ ಬಳಿಕ ಕೋರ್ಟ್ ಮಧ್ಯ ಪ್ರವೇಶಿಸಿ 24 ಗಂಟೆಯೊಳಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಗಳನ್ನು ಡಿಲಿಟ್ ಮಾಡಿ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸುವಂತೆ ಮೌಖಿಕ ಸೂಚನೆ ನೀಡಿದೆ.