ಮನೆ ಕಾನೂನು ಮೌಖಿಕ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ: ಹೈಕೋರ್ಟ್ ನಿಂದ ಮಧ್ಯಂತರ ಆದೇಶ ಪ್ರಕಟ

ಮೌಖಿಕ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ: ಹೈಕೋರ್ಟ್ ನಿಂದ ಮಧ್ಯಂತರ ಆದೇಶ ಪ್ರಕಟ

0

ನವದೆಹಲಿ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ವಿಚಾರಣೆ ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ಈಗ ವಿಚಾರಣೆ ನಡೆಸಲು ಸಾಧ್ಯವಿಲ್ಲ, ಹೈಕೋರ್ಟ್ ನಲ್ಲಿ ಮೊದಲು ತೀರ್ಪು ಬರಲಿ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಈ ಮೂಲಕ ಹಿಜಾಬ್ ವಿವಾದ ಕುರಿತು ನಿನ್ನೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಮೌಖಿಕ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದವರಿಗೆ ಆರಂಭಿಕ ಹಿನ್ನಡೆಯಾದಂತಾಗಿದೆ. 

ಕೆಲವು ಪರೀಕ್ಷೆಗಳು ಅಡಚಣೆಯಾದರೆ ಮತ್ತು ನಾವು ಅದನ್ನು ಸೂಕ್ತ ಸಮಯದಲ್ಲಿ ತೆಗೆದುಕೊಳ್ಳುತ್ತೇವೆ. ನಾವು ಸೂಕ್ತ ಸಂದರ್ಭದಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ವಿಷಯವನ್ನು ರಾಷ್ಟ್ರ ಮಟ್ಟಕ್ಕೆ ವ್ಯಾಪಿಸೋದು ಬೇಡ. ಕರ್ನಾಟಕ ಹೈಕೋರ್ಟ್ ನಡೆಯುತ್ತಿರುವ ವಿಚಾರಣೆಯನ್ನು ಗಮನಿಸುತ್ತಿದ್ದೇವೆ ಇದೇ ವೇಳೆ ಇಂದೇ ಹೈಕೋರ್ಟ್ ಮೌಖಿಕ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿತು.
ಗುರುವಾರ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಉಡುಪು ಧರಿಸುವಂತಿಲ್ಲ ಎಂದು ಮೌಖಿಕ ಆದೇಶ ನೀಡಿತ್ತು. ಇಂದು ಹೈಕೋರ್ಟ್ ನಿಂದ ಮಧ್ಯಂತರ ಆದೇಶ ಪ್ರಕಟವಾಗಿದೆ.

ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ. ಹಿಜಾಬ್, ಧಾರ್ಮಿಕ ಬಾವುಟಗಳನ್ನಾಗಲೀ ತರಗತಿಯೊಳಗೆ ತರುವಂತಿಲ್ಲ. ಮುಂದಿನ ಆದೇಶದವರೆಗೂ ಇವುಗಳನ್ನು ತರದಂತೆ ನಿರ್ಬಂಧಿಸುತ್ತಿದ್ದೇವೆ. ಶಿಕ್ಷಣ ಸಂಸ್ಥೆಗಳನ್ನು ತೆರೆದು ವಿದ್ಯಾರ್ಥಿಗಳು ಮರಳಲು ಅವಕಾಶ ನೀಡಿ. ಕಾಲೇಜು ಅಭಿವೃದ್ದಿ ಸಮಿತಿಯ ಸಮವಸ್ತ್ರಕ್ಕೆ ಬದ್ದವಾಗಿರಬೇಕು ಎಂದು ಪೀಠ ಆದೇಶ ನೀಡಿದೆ.
ಉಡುಪಿ ಸರ್ಕಾರಿ ಕಾಲೇಜಿನಲ್ಲಿ  ತರಗತಿ ನಡೆಯುವ ವೇಳೆ ಹಿಜಾಬ್​ ಧರಿಸಲು  ಅನುಮತಿ ನಿರಾಕರಣೆ ಪ್ರಶ್ನಿಸಿ ಯುವತಿ ಸಲ್ಲಿಸಿದ್ದ ರಿಟ್​ ಅರ್ಜಿ ವಿಚಾರಣೆ ಕರ್ನಾಟಕ ಹೈ ಕೋರ್ಟ್​​ ಮುಖ್ಯ ನ್ಯಾಯಾಧೀಶರ ಪೀಠಕ್ಕೆ (ವಿಸ್ತೃತ ಪೀಠಕ್ಕೆ) ವರ್ಗಾವಣೆಗೊಂಡಿತ್ತು. ಮೂವರು ನ್ಯಾಯಮೂರ್ತಿಗಳನ್ನೊಳಗೊಂಡ ಪೀಠ ಗುರುವಾರ ವಿಚಾರಣೆ ಆಲಿಸಿ ಮೌಖಿಕ ಸೂಚನೆ ನೀಡಿತ್ತು. ಇಂದು ಆದೇಶವನ್ನು ಪ್ರಕಟಿಸಿದೆ.
ಸಿಜೆ ರಿತುರಾಜ್ ಅವಸ್ಥಿ, ನ್ಯಾ, ಜೆ ಎಂ ಖಾಜಿ, ನ್ಯಾ, ಕೃಷ್ಣ ದೀಕ್ಷಿತ್ ಸೇರಿದ ತ್ರಿಸದಸ್ಯ ಪೀಠ ಹಿಜಾಬ್ ವಿಚಾರಣೆಯನ್ನು ಮುಂದೂಡಿದ್ದು, ಮುಂದಿನ ವಿಚಾರಣೆ ಸೋಮವಾರ ಮಧ್ಯಾಹ್ನ 2:30ಕ್ಕೆ ನಡೆಯಲಿದೆ.