ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲು ಮಾನದಂಡವನ್ನು ರೂಪಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ರಾಜ್ಯ ಸರ್ಕಾರಗಳು ಈ ಕಾರ್ಯಮಾಡಬೇಕೆಂದು ತಿಳಿಸಿದೆ.
ಸ್ವಾತಂತ್ರ್ಯ ಬಂದು ಸುಮಾರು 75 ವರ್ಷಗಳಾದರೂ ಎಸ್‌ಸಿ ಮತ್ತು ಎಸ್‌ಟಿಗೆ ಸೇರಿದವರನ್ನು ಹಿಂದುಳಿದ ವರ್ಗಗಳ ಅರ್ಹತೆಯ ಮಟ್ಟಕ್ಕೆ ತರಲಾಗಿಲ್ಲ ಎಂಬುದು ಜೀವ ಮಾನದ ಸತ್ಯ ಎಂದು ಕೇಂದ್ರ ಸರ್ಕಾರವು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿತ್ತು. ಈ ಬಗ್ಗೆ 2021ರ ಅಕ್ಟೋಬರ್ 26 ರಂದು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ಇಂದು ಈ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು, ಎಸ್‌ಸಿ ಮತ್ತು ಎಸ್‌ಟಿಗಳ ಪ್ರಾತಿನಿಧ್ಯದ ಅಸಮರ್ಪಕತೆಯ ಬಗ್ಗೆ ಡೇಟಾವನ್ನು ಸಂಗ್ರಹಿಸಲು ಆಯಾ ರಾಜ್ಯಗಳಿಗೆ ಅವಕಾಶವಿದೆ. ಸುಪ್ರೀಂಕೋರ್ಟ್ ಇದಕ್ಕೆ ಮಾನದಂಡವನ್ನು ರೂಪಿಸಲು ಸಾಧ್ಯವಿಲ್ಲ. ಈ ಕಾರ್ಯವನ್ನು ರಾಜ್ಯ ಸರ್ಕಾರಗಳು ಮಾಡಬೇಕೆಂದು ತಿಳಿಸಿದೆ.