ಮನೆ ರಾಜ್ಯ ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಎಚ್ಚರಿಕೆ: ಆತ್ಮವಿಮರ್ಶೆ ಮಾಡಿಕೊಳ್ಳಬೇಕೆಂದ ದಿನೇಶ್ ಗುಂಡೂರಾವ್

ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಎಚ್ಚರಿಕೆ: ಆತ್ಮವಿಮರ್ಶೆ ಮಾಡಿಕೊಳ್ಳಬೇಕೆಂದ ದಿನೇಶ್ ಗುಂಡೂರಾವ್

0

ಬೆಂಗಳೂರು: ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಎಚ್ಚರಿಕೆ‌ ಗಂಭೀರವಾದ ವಿಚಾರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆಗಳಿಗೆ ಸಹಿ ಹಾಕಲು ವಿಳಂಬ ಮಾಡುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌, ಬೆಂಕಿಯೊಂದಿಗೆ ಸರಸವಾಡುತ್ತಿದ್ದೀರಿ ಎಂಬ ಎಚ್ಚರಿಕೆ ನೀಡಿದ್ದರ ಕುರಿತು ಎಕ್ಸ್ ಖಾತೆಯಲ್ಲಿ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಪಂಜಾಬ್, ಕೇರಳ, ತಮಿಳುನಾಡು ರಾಜ್ಯಪಾಲರು ಕೇಂದ್ರದ ಮರ್ಜಿಗೆ ಬಿದ್ದು ಪಕ್ಷಪಾತವಾಗಿ ನಡೆದುಕೊಳ್ಳದೆ ಸಂವಿಧಾನದ ಘನತೆ ಎತ್ತಿ ಹಿಡಿದಿದ್ದರೆ ಸುಪ್ರೀಂ ಇಷ್ಟು ಕಟುವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿರಲಿಲ್ಲ. ಸುಪ್ರೀಂನ‌ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅವರೆಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದಿದ್ದಾರೆ.