ಚಾಮರಾಜನಗರ: ಹುಲಿ ಉಗುರುಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಚಾಮರಾಜನಗರದ ಪಣಜನೂರು ವನ್ಯಜೀವಿಧಾಮದಲ್ಲಿ ಈ ಘಟನೆ ನಡೆದಿದೆ. ಬೂದಿಪಡಗ ಗ್ರಾಮದ ಚಿಕ್ಕಮಾದ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಚಿಕ್ಕಮಾದ ಐದು ಹುಲಿ ಉಗುರುಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ದೂರು ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Saval TV on YouTube