ಮನೆ ರಾಜ್ಯ ಬೆಂಗಳೂರಿನಲ್ಲಿ ಶಂಕಿತ ಉಗ್ರರಿಂದ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು: ಪೊಲೀಸ್ ಆಯುಕ್ತ ದಯಾನಂದ್

ಬೆಂಗಳೂರಿನಲ್ಲಿ ಶಂಕಿತ ಉಗ್ರರಿಂದ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು: ಪೊಲೀಸ್ ಆಯುಕ್ತ ದಯಾನಂದ್

0

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

Join Our Whatsapp Group

ಈ ಕುರಿತು ಸುದ್ದಿಗೋ‍ಷ್ಠಿ ನಡೆಸಿ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಬಂಧಿತ ಶಂಕಿತ ಉಗ್ರರು ಬೆಂಗಳೂರಿನಲ್ಲಿ ವಿಧ್ವಾಂಸಕ ಕೃತ್ಯ ಎಸಗಲು ಪ್ಲಾನ್ ನಡೆಸಿದ್ದರು.  ಕೆಲವು ಪ್ರಮುಖ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ  ಮಾಡಿ ಐವರನ್ನ ಬಂಧಿಸಲಾಗಿದೆ. ಇದರೊಂದಿಗೆ ಅವರ ಪ್ಲ್ಯಾನ್​ ವಿಫಲಗೊಳಿಸಲಾಗಿದೆ ಎಂದರು.

ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಐದು ಜನರ ಮನೆ ಮೇಲೆ ದಾಳಿ ಮಾಡಿ , ಏಳು ಪಿಸ್ತೂಲ್ 45 ಗುಂಡು,12 ಮೊಬೈಲ್ ಫೋನ್, ಡ್ರ್ಯ್ಯಾಗರ್, ವಾಕಿ ಟಾಕಿ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿದೇಶದಿಂದ ವಿಧ್ವಂಸಕ ಕೃತ್ಯ್ಕಕೆ ವಿದೇಶದಿಂದ ಫಂಡಿಂಗ್ ಆಗುತ್ತಿತ್ತು ಎಂದು ಎಂಬ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದರು.

 2008ರಲ್ಲಿ ನಡೆದಿದ್ದ ಸೀರಿಯಲ್ ಸ್ಫೋಟ ಆರೋಪಿ ನಸೀರ್​ ಸಂಚು ರೂಪಿಸಿದ್ದ. ಟಿ.ನಸೀರ್​​​ ಹಾಗೂ ಜುನೈದ್ ಈ ಪ್ರಕರಣದ ಮಾಸ್ಟರ್ ಮೈಂಡ್ ​ಗಳಾಗಿದ್ದು, ಸದ್ಯ ಟಿ.ನಸೀರ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾನೆ. 2008 ರ ಸೀರಿಯಲ್ ಬ್ಲಾಸ್ಟ್ ಕೇಸ್ ನ ಅರೋಪಿ ಟಿ ನಜೀರ್ ಎಲ್ ಇ ಟಿ ಸಂಘಟನೆಗೆ ಸೇರಿದ್ದವನು. ಈ ಶಂಕಿತರ ಉಗ್ರರು ಕೃತ್ಯವೆಸಗಲು ವಿದೇಶದಿಂದ ಹಣ ಬಂದಿದೆ. ಆರೋಪಿಗಳಿಗೆ ಆನ್ ಲೈನ್ ಹಾಗೂ ನಗದು ರೂಪದಲ್ಲಿ ಹಣ ಪೂರೈಕೆಯಾಗಿದೆ. ಈ ಬಗ್ಗೆ ಐವರು ಆರೋಪಿಗಳನ್ನು 15 ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದರು.