ಮನೆ ಅಪರಾಧ ಶಾಲೆಯಲ್ಲಿ ಮದ್ಯ ಸೇವಿಸಿ ಪಾಠ ಮಾಡುತ್ತಿದ್ದ ಇಬ್ಬರು ಶಿಕ್ಷಕಿಯರ ಅಮಾನತು

ಶಾಲೆಯಲ್ಲಿ ಮದ್ಯ ಸೇವಿಸಿ ಪಾಠ ಮಾಡುತ್ತಿದ್ದ ಇಬ್ಬರು ಶಿಕ್ಷಕಿಯರ ಅಮಾನತು

0

ತುಮಕೂರು(Tumkur): ಶಾಲೆಯಲ್ಲಿ ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಆರೋಪದಡಿ ತಾಲ್ಲೂಕಿನ ಗಳಿಗೇನಹಳ್ಳಿ ಕ್ಲಸ್ಟರ್‌ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗಂಗಲಕ್ಷ್ಮಮ್ಮ ಹಾಗೂ ನಾಗರತ್ನಮ್ಮ ಅವರನ್ನೂ ಅಮಾನತು ಗೊಳಿಸಲಾಗಿದೆ.

ದೂರು ಬಂದ ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯ್ಕ ಶಾಲೆಗೆ ಭೇಟಿನೀಡಿ ಪರಿಶೀಲಿಸಿದ್ದಾರೆ.

ಈ ಸಂದರ್ಭ ಗ್ರಾಮಸ್ಥರು, ಜನರು ಈ ಸಮಯದಲ್ಲಿ ಶಿಕ್ಷಕಿಯರ ವಿರುದ್ಧ ದೂರಿನ ಸುರಿಮಳೆಗೈದಿದ್ದಾರೆ.

ನಂತರ ಮಾತನಾಡಿದ ಡಿಡಿಪಿಐ ಸಿ.ನಂಜಯ್ಯ, ಶಿಕ್ಷಕಿ ಗಂಗಲಕ್ಷ್ಮಮ್ಮ ಅವರ ಟೇಬಲ್ ತೆರೆದು ಪರಿಶೀಲಿಸಿದಾಗ ಅದರಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ. ಇದನ್ನು ಪೊಲೀಸರಿಗೆ ನೀಡಿದ್ದು, ಪರಿಶೀಲಿಸಿ ಕ್ರಮ ಜರುಗಿಸಬೇಕು, ಅಗತ್ಯ ವರದಿ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದರು.

ಶಾಲೆಯ ಇಬ್ಬರು ಶಿಕ್ಷಕಿಯರ ನಡುವೆ ಹೊಂದಾಣಿಕೆ ಇಲ್ಲದೆ ಪದೇ ಪದೇ ಜಗಳ ಮಾಡಿಕೊಳ್ಳುತ್ತಿದ್ದರು. ಮಕ್ಕಳಿಗೆ ಸರಿಯಾಗಿ ಪಾಠ ಮಾಡುತ್ತಿರಲಿಲ್ಲ. ಈ ಎಲ್ಲಾ ಬೆಳವಣಿಗೆ ಗಮನಿಸಿದ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಬಿಇಒಗೆ ಬುಧವಾರ ದೂರು ಸಲ್ಲಿಸಿದ್ದರು.

ಶಾಲೆಗೆ ಭೇಟಿನೀಡಿದ ಬಿಇಒ ಅಲ್ಲಿನ ವಸ್ತುಸ್ಥಿತಿ ಮಾಹಿತಿ ಪಡೆದುಕೊಂಡಿದ್ದಾರೆ.

ಶಿಕ್ಷಕಿ ಶಾಲೆಯಲ್ಲೇ ಮದ್ಯ ಸೇವಿಸುತ್ತಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ. ವಿಚಾರಣೆ ಕಾಯ್ದಿರಿಸಿ ಇಬ್ಬರು ಶಿಕ್ಷಕಿಯರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಹಿಂದಿನ ಲೇಖನಮೈಸೂರು: ಕಾಮಾಕ್ಷಿ ಆಸ್ಪತ್ರೆಯಲ್ಲಿ ಓಣಂ ಆಚರಣೆ
ಮುಂದಿನ ಲೇಖನಭಾಗ್ಯದಾ ಲಕ್ಷ್ಮೀ ಬಾರಮ್ಮಾ ಬಾರಮ್ಮಾ