ಮನೆ ಅಪರಾಧ ಸ್ವಾತಿ ಕೊಲೆ ಪ್ರಕರಣ:ಆರೋಪಿ ಬಂಧನ

ಸ್ವಾತಿ ಕೊಲೆ ಪ್ರಕರಣ:ಆರೋಪಿ ಬಂಧನ

0

ರಾಣೆಬೆನ್ನೂರು: ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಹಾವೇರಿಯ ನರ್ಸ್ ಸ್ವಾತಿ ಕೊಲೆ ಪ್ರಕರಣದಲ್ಲಿ ಪೊಲೀಸರು ನಯಾಝ್ ಇಮಾಮ್ ಸಾಬ್ ಬೆಣ್ಣಿಗೇರಿ ಎಂಬಾತನನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಇನ್ನೂ ಕೆಲವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ರಾಣೆಬೆನ್ನೂರು ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿದ್ದ ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಮಾರ್ಚ್ 6ರಂದು ರಾಣೆಬೆನ್ನೂರು ತಾಲೂಕಿನ ಪತ್ತೇಪುರ ಬಳಿ ತುಂಗಾಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಅವರನ್ನು ಕೊಲೆ ಮಾಡಿ ನದಿಗೆಸೆದಿರುವುದಾಗಿ ವರದಿ ಬಂದಿತ್ತು.

ಆ ಹಿನ್ನೆಲೆಯಲ್ಲಿ ಸ್ವಾತಿ ಕೊಲೆ ಪ್ರಕರಣ ಭಾರೀ ಸಂಚಲನ ಮೂಡಿಸಿತ್ತು. ಕೊಲೆಗಾರರು ಮುಸ್ಲಿಮರು ಎಂಬ ವಿಷಯ ವ್ಯಾಪಕವಾಗಿ ಹರಡಿದ್ದರಿಂದ ಹಾವೇರಿ ಜಿಲ್ಲೆಯಾದ್ಯಂತ ಆತಂಕದ ವಾತಾವರಣಕ್ಕೂ ಈ ಘಟನೆ ಕಾರಣವಾಗಿತ್ತು. ಹಾವೇರಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಘಟನೆ ಲವ್ ಜಿಹಾದ್ ಎಂದು ಹೇಳುವ ಮೂಲಕ ಅದಕ್ಕೆ ಕೋಮು ಆಯಾಮ ಕೊಡುವ ಪ್ರಯತ್ನವನ್ನೂ ಮಾಡಿದ್ದರು.

ಇದೀಗ ಸ್ವಾತಿ (22) ಕೊಲೆ ಪ್ರಕರಣ ಬೇಧಿಸಿರುವ ಪೊಲೀಸರು, ನಯಾಝ್ ಇಮಾಮ್‌ ಸಾಬ್ ಬೆಣ್ಣಿಗೇರಿ (28) ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಸಹಕರಿಸಿದ್ದಾರೆ ಎನ್ನಲಾದ ನಯಾಝ್‌ನ ಸ್ನೇಹಿತರಾದ ಮಾಸೂರಿನ ದುರ್ಗಾಚಾರಿ ಬಡಿಗೇರ ಮತ್ತು ವಿನಾಯಕ ಪೂಜಾರ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ರಾಣೆಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ಮಾರ್ಚ್ 6ರಂದು ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿತ್ತು. ಸ್ವಾತಿ ಅವರನ್ನು ಕೊಲೆ ಮಾಡಿ ನದಿಗೆ ಎಸೆಯಲಾಗಿದೆ ಎಂಬ ಸಂಗತಿ ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿತ್ತು.

ಅದರ ಬೆನ್ನಲ್ಲೇ ರಟ್ಟೀಹಳ್ಳಿ, ರಾಣೆಬೆನ್ನೂರು ಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಹಿರೇಕೆರೂರು ತಾಲೂಕಿನ ಹಳೇ ವೀರಾಪುರ ಗ್ರಾಮದ ನಯಾಝ್ ಎಂಬಾತ ತನ್ನ ಸ್ನೇಹಿತರಾದ ದುರ್ಗಾಚಾರಿ ಮತ್ತು ವಿನಾಯಕನ ಎಂಬುವರೊಂದಿಗೆ ಸೇರಿ ಸ್ವಾತಿಯನ್ನು ಕೊಲೆ ಮಾಡಿದ್ದಾನೆ ಎಂಬ ಆಘಾತಕಾರಿ ಸಂಗತಿಯನ್ನು ಬಾಯಿಬಿಡಿಸಿದ್ದರು.