ಮನೆ ಕ್ರೀಡೆ ಟಿ – 20 ವಿಶ್ವಕಪ್ನ ವೇಳಾಪಟ್ಟಿ ಬಹಿರಂಗ

ಟಿ – 20 ವಿಶ್ವಕಪ್ನ ವೇಳಾಪಟ್ಟಿ ಬಹಿರಂಗ

0

ಮೆಲ್ಬರ್ನ್(ಆಸ್ಟ್ರೇಲಿಯಾ): ಚುಟುಕು ಕ್ರಿಕೆಟ್​ ವಿಶ್ವಸಮರ ಟಿ-20 ಕ್ರಿಕೆಟ್​ ವಿಶ್ವಕಪ್​​ಗೆ ದಿನಾಂಕ ನಿಗದಿಯಾಗಿದ್ದು, ಮೊದಲ ರೌಂಡ್​ನ ಪಂದ್ಯಗಳು ಅಕ್ಟೋಬರ್ 16ರಿಂದ ಆರಂಭವಾಗಲಿವೆ. ಮೊದಲ ರೌಂಡ್​ನ ಮೊದಲ ಪಂದ್ಯ ಶ್ರೀಲಂಕಾ ಮತ್ತು ನಮೀಬಿಯಾ ನಡುವೆ ನಡೆಯಲಿದೆ.

ಅಕ್ಟೋಬರ್ 21ರವರೆಗೆ ನಡೆಯುವ ಈ ಪಂದ್ಯಗಳಲ್ಲಿ ಅರ್ಹತೆ ಪಡೆದ ತಂಡಗಳು ಸೂಪರ್​-12 ತಂಡಗಳೊಡನೆ ಆಡಲು ಅರ್ಹತೆ ಪಡೆದುಕೊಳ್ಳುತ್ತವೆ. ಮೊದಲ ರೌಂಡ್​ನಲ್ಲಿ ಶ್ರೀಲಂಕಾ, ನಮೀಬಿಯಾ, ಸ್ಕಾಟ್ಲೆಂಡ್, ವೆಸ್ಟ್​ ಇಂಡೀಸ್ ತಂಡಗಳು ಆಡಲಿವೆ.ICC Men’s T20 WC 2022: Match time table announcedಟಿ – 20 ವಿಶ್ವಕಪ್​ನ ವೇಳಾಪಟ್ಟಿಸೂಪರ್ 12 ಪಂದ್ಯಗಳು ಅಕ್ಟೋಬರ್ 22ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾಗಳ ನಡುವೆ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ. ಭಾರತವು ಅಕ್ಟೋಬರ್ 23ರಂದು ಪಾಕಿಸ್ತಾನದೊಂದಿಗೆ ಮೆಲ್ಬರ್ನ್ ಕ್ರಿಕೆಟ್​ ಗ್ರೌಂಡ್​ನಲ್ಲಿ ಮೊದಲ ಪಂದ್ಯವನ್ನು ಆಡಲಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತಮೊದಲ ಸೆಮಿಫೈನಲ್ ನವೆಂಬರ್ 9ರಂದು ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ಮತ್ತು ಎರಡನೇ ಸೆಮಿಫೈನಲ್ ನವೆಂಬರ್ 10ರಂದು ಅಡಿಲೇಡ್ ಓವಲ್​ ಗ್ರೌಂಡ್​ನಲ್ಲಿ ನಡೆಯಲಿದೆ. ಇದಾದ ನಂತರ ನವೆಂಬರ್ 13ರಂದು ಫೈನಲ್ ಪಂದ್ಯ ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ ಎಂದು ಐಸಿಸಿ ತಿಳಿಸಿದೆ.

ಹಿಂದಿನ ಲೇಖನಹಣದ ಸಮಸ್ಯೆ: ಈ ಗಿಡ ಮನೆಯಲ್ಲಿ ನೆಟ್ಟರೆ ಪರಿಹಾರ
ಮುಂದಿನ ಲೇಖನದಕ್ಷಿಣ ಆಫ್ರಿಕಾ ಎದುರಿನ ಎರಡನೇ ಏಕದಿನ ಪಂದ್ಯ: ಪಂದ್ಯ ಗೆಲ್ಲಲೇ ಬೇಕಾದ ಒತ್ತಡದಲ್ಲಿ ರಾಹುಲ್