ಮನೆ ಕ್ರೀಡೆ ಐರ್ಲೆಂಡ್‌ ವಿರುದ್ಧದ ಟಿ20 ಪಂದ್ಯ ಟಾಸ್‌ ಗೆದ್ದ ಭಾರತ ತಂಡದಿಂದ ಬ್ಯಾಟಿಂಗ್‌ ಆಯ್ಕೆ

ಐರ್ಲೆಂಡ್‌ ವಿರುದ್ಧದ ಟಿ20 ಪಂದ್ಯ ಟಾಸ್‌ ಗೆದ್ದ ಭಾರತ ತಂಡದಿಂದ ಬ್ಯಾಟಿಂಗ್‌ ಆಯ್ಕೆ

0

ನವದೆಹಲಿ (New Delhi): ಐರ್ಲೆಂಡ್‌ ವಿರುದ್ಧದ ಟಿ20 ಸರಣಿಯಲ್ಲಿ ಟಾಸ್‌ ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಸದ್ಯ ಬ್ಯಾಟಿಂಗ್ ಆರಂಭಿಸಿರುವ ಭಾರತ 3 ಓವರ್‌ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 21 ರನ್ ಗಳಿಸಿದೆ. ಇಶಾನ್‌ ಕಿಶನ್‌ ಜತೆ ಸಂಜು ಸ್ಯಾಮ್ಸನ್ ಇನಿಂಗ್ಸ್‌ ಆರಂಭಿಸಿದ್ದಾರೆ.

ಮೊದಲ ಪಂದ್ಯದಲ್ಲಿ ನಿರೀಕ್ಷೆಗಿಂತಲೂ ಹೆಚ್ಚಿನ ಪ್ರತಿರೋಧ ಒಡ್ಡಿದ್ದ ಐರ್ಲೆಂಡ್‌ ತಂಡವನ್ನು ಏಳು ವಿಕೆಟ್‌ಗಳಿಂದ ಮಣಿಸಿದ್ದ ಭಾರತ ತಂಡ, ಸರಣಿಯಲ್ಲಿ 1–0 ರಲ್ಲಿ ಮುನ್ನಡೆ ಸಾಧಿಸಿದೆ.

ಟಿ–20 ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯ ಇದಾಗಿದ್ದು, ಹಾರ್ದಿಕ್‌ ಪಾಂಡ್ಯ ಬಳಗ ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿದೆ.

ಹಿಂದಿನ ಲೇಖನನೂಪುರ್‌ ಪರ ಪೋಸ್ಟ್‌ : ವ್ಯಕ್ತಿಯ ಶಿರಚ್ಚೇದ
ಮುಂದಿನ ಲೇಖನನೂಪುರ್‌ ಶರ್ಮಾ ಬೆಂಬಲಿಸಿದ ವ್ಯಕ್ತಿಯ ಹತ್ಯೆ: ಇಬ್ಬರ ಬಂಧನ