ಮೈಸೂರು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ನ್ಯಾಯಧೀಶರ ವಿರುದ್ಧ ಕ್ರಮಕೈಗೊಳ್ಳದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಯಚೂರಿನಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನ್ಯಾಯಾಧೀಶರಿಂದ ಅಪಮಾನ ವಿಚಾರವಾಗಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಕಾನೂನು ಸಚಿವರ ವಿರುದ್ದ ಕಿಡಿಕಾರಿದ್ದಾರೆ. ಅಲ್ಲದೆ, ಈ ಕೂಡಲೇ ನ್ಯಾಯಧೀಶರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನ್ಯಾಯಾಧೀಶರ ಮೇಲೆ ರಾಜ್ಯ ಸರ್ಕಾರ ಈವರೆಗೂ ಸೂಕ್ತ ಕ್ರಮಕೈಗೊಂಡಿಲ್ಲ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮೌನ ವಹಿಸಿರುವುದು ಸರಿಯಲ್ಲ. ಇವರ ಮೌನ ನೋಡಿದರೆ, ನ್ಯಾಯಾಧೀಶರ ನಡವಳಿಕೆಗೆ ಇವರುಗಳ ಸಮ್ಮತಿಯಿರುವಂತೆ ಕಾಣಿಸುತ್ತಿದೆ. ಕಾನೂನಿನ ಪಾಠ ಹೇಳುವ ನ್ಯಾಯಾಧೀಶರೇ ಅಂಬೇಡ್ಕರ್ ಗೆ ಅಪಮಾನ ಮಾಡಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ವಿಚಾರದಲ್ಲಿ ಬಿಜೆಪಿ ಸರ್ಕಾರ ಕೈಕಟ್ಟಿ ಕುಳಿತಿರುವುದು ನಾಚಿಕೇಗೇಡಿನ ಸಂಗತಿ. ಬಿಜೆಪಿಯಲ್ಲಿರುವ ದಲಿತ ನಾಯಕರುಗಳು ಕೂಡ ಬಾಯಿ ಮುಚ್ಚಿಕೊಂಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದAದಿನಿAದಲೂ ದೇಶಾದ್ಯಂತ ದಲಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಜೆಡಿಎಸ್ ಶಾಸಕರು ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿರುವ ವಿಚಾರವಾಗಿ ಮಾತನಾಡಿದ ಧ್ರುವನಾರಾಯಣ ಅವರು, ಜೆಡಿಎಸ್ ನಲ್ಲಿ ಅಸಮಾಧಾನಗೊಂಡಿರುವ ಶಾಸಕರು ಕಾಂಗ್ರೆಸ್ ನ ಹಿರಿಯ ನಾಯಕರ ಸಂಪರ್ಕದಲ್ಲಿರುವುದು ನಿಜ. ಶಾಸಕ ಸಿ.ಎಸ್.ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸೇರಿದಂತೆ ಜೆಡಿಎಸ್ ನ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಜೆಡಿಎಸ್ ಪಕ್ಷದೊಳಗಿನ ಕುಟುಂಬ ರಾಜಕಾರಣದಿಂದ ಬೇಸತ್ತಿದ್ದಾರೆ. ಈ ರೀತಿ ಬೇಸತ್ತಿರುವ ಜೆಡಿಎಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿದರು.
ಸಚಿವ ವಿ.ಸೋಮಣ್ಣ ಅವರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಎಲ್ಲೂ ಪ್ರಸ್ತಾಪವಾಗಿಲ್ಲ. ಅವರು ಈಗ ಮಂತ್ರಿಯಾಗಿದ್ದಾರೆ. ಈಗಷ್ಟೇ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಅವರು ಕಾಂಗ್ರೆಸ್ ಸೇರ್ಪಡೆ ಕುರಿತು ಯಾವುದೇ ಹಂತದಲ್ಲೂ ಪ್ರಸ್ತಾಪವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಮಹಾರಾಜರನ್ನು ಬಿಟ್ಟರೇ ನಾನೇ ಅತಿ ಹೆಚ್ಚು ಅಂತರದಿAದ ಗೆದ್ದಿದ್ದೇನೆ. ನನ್ನಿಂದಲೇ ಮೈಸೂರು ಹೆಚ್ಚು ಅಭಿವೃದ್ಧಿ ಆಗಿದೆ ಎಂಬ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಈ ಹಿಂದೆ ೧.೬೫ ಲಕ್ಷ ಮತಗಳ ಅಂತರದಿAದ ಗೆದ್ದಿದ್ದರು. ನಾನು ಸಹ ೧.೪೧ ಲಕ್ಷ ಮತಗಳ ಅಂತರದಿAದ ಗೆದ್ದಿದ್ದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದಾಗಿ ೧೮೧೬ ಮತಗಳ ಅಂತರದಿAದ ಸೋತಿದ್ದೇನೆ. ಯಾವುದೇ ಚುನಾವಣೆಯಲ್ಲಿ ಗೆಲುವಿನ ಅಂತರ ಮುಖ್ಯವಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಮೈಸೂರು ವಿಮಾನ ನಿಲ್ದಾಣ ನಿರ್ಮಾಣ ಆಗಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ. ಇದನ್ನು ಮೇಲ್ದರ್ಜೆಗೇರಿಸಲು ಸಂಸದ ಪ್ರತಾಪ್ ಸಿಂಹ ಶ್ರಮಪಟ್ಟಿರಬಹುದು ಅಷ್ಟೇ. ರಿಂಗ್ ರಸ್ತೆ ನಿರ್ಮಾಣ ಆಗಿದ್ದು, ಕೂಡ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಈಗಿನ ಸರ್ಕಾರ ಪೂರ್ಣಗೊಳಿಸುತ್ತಿದೆ ಎಂದು ಹೇಳಿದರು.