ಮನೆ ರಾಜ್ಯ ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ

ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ನೈತಿಕ ಪೊಲೀಸ್ ಗಿರಿ  ಮಾಡುವವರ‌ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್ ​ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.

Join Our Whatsapp Group

ಇಂದು ನಡೆದ ಹಿರಿಯ ಪೊಲೀಸರು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಅಗಬೇಕು. ಅನಧಿಕೃತ ಕ್ಲಬ್ ನಡೆಸಲು ಅವಕಾಶ ನೀಡಬಾರದು. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್​ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಯಾರಿಗೂ ತಾರತಮ್ಯ ಮಾಡದೆ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹದಗೆಡಬಾರದು. ಚುನಾವಣೆಯಲ್ಲಿ ಯಾವ ರೀತಿ ಕೆಲಸ ಮಾಡಿದ್ದೀರಾ ಅಂತಾ ಗೊತ್ತಿದೆ. ಮುಂದೆ ಯಾರಿಗೂ ತಾರತಮ್ಯ ಮಾಡಬೇಡಿ. ಮುಂದೆ ಜಿಲ್ಲಾ ಎಸ್​​ ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದರು.