ಕೊಚ್ಚಿ(Kochi): ಹಿಂಸಾಚಾರ ತಡೆಗೆ ಅಗತ್ಯವಾದ ಎಲ್ಲ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಕೇರಳ ಹೈಕೋರ್ಟ್ ಕಟ್ಟಪ್ಪಣೆ ಮಾಡಿದೆ.
ಎನ್‌ಐಎ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಕರೆ ನೀಡಿರುವ ಹರತಾಳ ಮತ್ತು ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಸ್ಚಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಕೇರಳದಲ್ಲಿ ಹರತಾಳಕ್ಕೆ ನಿಷೇಧ ಹೇರಲಾಗಿದೆ. ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡುವುದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಾಲಯ ಹೇಳಿದೆ.
ಹರತಾಳ ನಿಷೇಧಿಸಿರುವ ನ್ಯಾಯಾಲಯದ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಬಂದ್ ವೇಳೆ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ಬಸ್ ಧ್ವಂಸ ಮುಂತಾದ ಹಿಂಸಾಚಾರದ ಘಟನೆಗಳು ವರದಿಯಾಗಿವೆ.ಆಟೋ ಚಾಲಕ, ಬಸ್ ಚಾಲಕ, ಸಾರ್ವಜನಿಕರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
Saval TV on YouTube