ಮೈಸೂರು: ಮುಂಬರುವ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ಪೂರೈ ಕೆಗೆ ಯಾವುದೇ ಸಮಸ್ಯೆ ತಲೆದೋರದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್ .ಸಿ. ಮಹದೇವಪ್ಪ ಅವರು ಸೂಚನೆ ನೀಡಿದರು.
ನಗರದ ಜಲದರ್ಶಿನಿ ಅತಿಧಿ ಗೃಹದಲ್ಲಿ ಬರ ನಿರ್ವಹಣೆ ಸಿದ್ಧತೆ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಬೇಸಿಗೆ ಯಲ್ಲಿ ಎದುರಾಗುವ ಸವಾಲುಗಳ ನಿರ್ವ ಹಣೆಗೆ ವ್ಯವಸ್ಥಿತ ಪೂರ್ವ ತಯಾರಿ ನಡೆಸುವಂತೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಮುಂದಿನ ಮುಂಗಾರಿನವರೆಗೆ, ಕುಡಿಯುವ ನೀರು ಕೊರತೆಯಾಗದಂತೆ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಅಸಾದ್ ಉರ್ ರೆಹಮಾನ್ ಷರೀಫ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.