ಮನೆ ಕಾನೂನು ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕುವಾರು ಭೇಟಿ : ದೂರು ಸ್ವೀಕಾರ

ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕುವಾರು ಭೇಟಿ : ದೂರು ಸ್ವೀಕಾರ

0

ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬಂಧಪಟ್ಟ ಸಾರ್ವಜನಿಕ/ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಅಡಿಯಲ್ಲಿ ಕ್ರಮಬದ್ಧವಾಗಿ ಭರ್ತಿ ಮಾಡಿದ ದೂರುಗಳನ್ನು ನಮೂನೆ 01 ರಲ್ಲಿ ಮತ್ತು 02 ರಲ್ಲಿ ಪ್ರಮಾಣ ಪತ್ರಗಳನ್ನು ಅಗತ್ಯ ದಾಖಲಾತಿಗಳೊಡನೆ ದೂರು ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ನವೆಂಬರ್ 08 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1-00 ರವರೆಗೆ ತಾಲ್ಲೂಕುವಾರು ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸರಗೂರು ತಾಲ್ಲೂಕಿನ ಪಿ.ಡಬ್ಲ್ಯೂಡಿ ಗೆಸ್ಟ್ ಹೌಸ್, ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರವಾಸಿ ಮಂದಿರ, ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ದೂರು ಸ್ವೀಕಾರ ಕಾರ್ಯಕ್ರಮವು ನಡೆಯುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್ ವಿಭಾಗದ ಅಧೀಕ್ಷಕರಾದ ಎಸ್. ಸುರೇಶ್ ಬಾಬು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.