ತುಮಕೂರು: ಡೀಸೆಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿದ್ದು, ಡೀಸೆಲ್ ತುಂಬಿಸಿಕೊಳ್ಳಲು ಜನರು ಮುಗಿಬಿದ್ದಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಹರಿಸಮುದ್ರ ಗೇಟ್ ಬಳಿ ನಡೆದಿದೆ.
ಟ್ಯಾಂಕರ್ ಲಾರಿ ಪಲ್ಟಿಯಾಗಿ ನೀರಿನಂತೆ ಡೀಸೆಲ್ ಹರಿಯುತ್ತಿದ್ದು, ಜನರು ಕೈಗೆ ಸಿಕ್ಕ ಸಿಕ್ಕ ವಸ್ತುಗಳಿಂದ ಡೀಸೆಲ್ ತುಂಬಿಸಿಕೊಂಡಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.
ಸ್ಥಳಕ್ಕೆ ಪೊಲೀಸರು ಬಂದರೂ ಜನರು ಡೋಂಟ್ ಕೇರ್ ಎಂದಿದ್ದು, ಜನತೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಅಗ್ನಿಶಾಮಕ ದಳ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ಹೊತ್ತಿಕೊಳ್ಳದಂತೆ ಕ್ರಮ ಕೈಗೊಂಡಿದ್ದಾರೆ.
Saval TV on YouTube