ಚಿಕ್ಕಮಗಳೂರು : ತೆರಿಗೆ ವಂಚನೆ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಚಿಕ್ಕಮಗಳೂರಿನ ಲೈಫ್ ಲೈನ್ ಫೀಡ್ಸ್ (ಇಂಡಿಯಾ) ಪ್ರೈವೇಟ್ ಕಂಪನಿ ಮೇಲೆ ದಾಳಿ ಮಾಡಿದ್ದಾರೆ.
ಕಂಪನಿಯ ಮಾಲೀಕ ಕಿಶೋರ್ ಕುಮಾರ್ ಹೆಗ್ಡೆಯವರ ಮನೆ, ನಗರದ ರತ್ನಗಿರಿ ರಸ್ತೆಯಲ್ಲಿರುವ ಕಛೇರಿ ಸೇರಿದಂತೆ ಫಾರಂ ಹೌಸ್ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಂಪನಿ ಮಾಲೀಕರ ಸಮ್ಮುಖದಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. 12ಕ್ಕೂ ಹೆಚ್ಚು ವಾಹನಗಳಲ್ಲಿ ಬಂದ 40ಕ್ಕೂ ಹೆಚ್ಚು ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದಾರೆ.
ಪೊಲೀಸ್ ಇಲಾಖೆಗೆ ಯಾವುದೇ ಮಾಹಿತಿ ನೀಡದೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೈಫ್ ಲೈನ್ ಫೀಡ್ಸ್ (ಇಂಡಿಯಾ) ಪ್ರೈವೇಟ್ ಕಂಪನಿ ದೇಶ-ವಿದೇಶಗಳಿಗೆ ಲೈಫ್ ಲೈನ್ ಫೀಡ್ಸ್ (ಇಂಡಿಯಾ) ಪ್ರೈವೇಟ್ ಕಂಪನಿ ಕೋಳಿ ರಫ್ತು ಮಾಡುತ್ತಿದೆ ಎಂದು ತಿಳಿದುಬಂದಿದೆ.















