ಮನೆ ಮನರಂಜನೆ ಅಪ್ಪು ನಟನೆಯ ಗಂಧದಗುಡಿ  ಸಾಕ್ಷ್ಯಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಬೊಮ್ಮಾಯಿ ಘೋಷಣೆ

ಅಪ್ಪು ನಟನೆಯ ಗಂಧದಗುಡಿ  ಸಾಕ್ಷ್ಯಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಬೊಮ್ಮಾಯಿ ಘೋಷಣೆ

0

ಬೆಂಗಳೂರು(Bengaluru): ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ ನಟಿಸಿರುವ ಸಾಕ್ಷ್ಯಚಿತ್ರ ‘ಗಂಧದಗುಡಿ’ಗೆ ತೆರಿಗೆ ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಪ್ಪು’ ತಮ್ಮೊಂದಿಗೆ ಇಲ್ಲ ಎಂದು ನಂಬುವುದು ಕಷ್ಟ. ಅವರು ಈಗಲೂ ನಮ್ಮೊಂದಿಗಿದ್ದಾರೆ.

ರಾಜ್ಯದಾದ್ಯಂತ, ಕೊಳ್ಳೇಗಾಲದಿಂದ ಬೀದರ್‌’ವರೆಗೆ, ಪ್ರತಿ ಹಳ್ಳಿಯಲ್ಲೂ ಪುನೀತ್ ರಾಜ್‌’ಕುಮಾರ್ ಕಟೌಟ್‌’ಗಳನ್ನು ನೋಡಬಹುದು. ಪ್ರತಿಯೊಬ್ಬರ ಮನೆಗಳಲ್ಲಿ ‘ಅಪ್ಪು’ ಫೋಟೊ ಇಟ್ಟುಕೊಂಡಿರುವುದನ್ನು ನೋಡಿದರೆ ಅವರ ಮೇಲಿರುವ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಸಾಕ್ಷಿ ಎಂದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ‘ಗಂಧದಗುಡಿ’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ನ. 1ರಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಂದು ಸಂಜೆ 4 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪಿಆರ್‌ಕೆ ಪ್ರೊಡಕ್ಷನ್ಸ್‌ನಡಿ ನಿರ್ಮಾಣವಾಗಿರುವ ಈ ಚಿತ್ರವನ್ನು ‘ವೈಲ್ಡ್‌ ಕರ್ನಾಟಕ’ ಖ್ಯಾತಿಯ ಅಮೋಘವರ್ಷ ನಿರ್ದೇಶಿಸಿದ್ದಾರೆ. 2021ರ ಅಕ್ಟೋಬರ್ 29ರಂದು ಅಪ್ಪು ನಿಧನರಾದರು. ಈ ಕಾರಣಕ್ಕೆ ‘ಗಂಧದ ಗುಡಿ’ ಸಾಕ್ಷ್ಯಚಿತ್ರವನ್ನು ಅಕ್ಟೋಬರ್ 28 ರಂದು ಬಿಡುಗಡೆ ಮಾಡಲಾಗುತ್ತಿದೆ. ವಿಶೇಷ ಎಂದರೆ ಇದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕಾಗಿ ಅಭಿಮಾನಿಗಳು ಕಾತರರಾಗಿದ್ದಾರೆ.

ಹಿಂದಿನ ಲೇಖನಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬಸ್- ಟ್ರಕ್ ನಡುವೆ ಡಿಕ್ಕಿ 15 ಮಂದಿ ಸಾವು
ಮುಂದಿನ ಲೇಖನಮುನಿಯಬೇಡ ಗೆಳತಿ- ಕವನ