ಮನೆ ಅಪರಾಧ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ ಜೈಲುಪಾಲು

ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ ಜೈಲುಪಾಲು

0

ಚಿತ್ರದುರ್ಗ : ಮನೆಗೆ ಫೋನ್ ಕರೆ ಮಾಡಿದ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ವಸತಿ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಬಂಧಿಸಿದ ಪೊಲೀಸರು ಜೈಲಿಗೆ ಅಟ್ಟಿದ್ದಾರೆ. ವಿಡಿಯೋ ವೈರಲ್‌ ಆದ ಬಳಿಕ ನಾಪತ್ತೆಯಾಗಿದ್ದ ವೀರೇಶ್‌ನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದರು.

ತಡರಾತ್ರಿ ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ನ್ಯಾಯಾಧೀಶರು 2 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ವೀರೇಶ್‌ನನ್ನು ಚಿತ್ರದುರ್ಗ ಜೈಲಿಗೆ ಕಳುಹಿಸಿದ್ದಾರೆ. ಶಿಕ್ಷಕ ವೀರೇಶ್ ಹಿರೇಮಠ್‌ನನ್ನು ಅಮಾನತುಗೊಳಿಸಿ ಚಿತ್ರದುರ್ಗ ಡಿಸಿ ವೆಂಕಟೇಶ್ ಆದೇಶ ಪ್ರಕಟಿಸಿದ್ದಾರೆ.

ಗುರು ತಿಪ್ಪೇಸ್ವಾಮಿ ದೇವಸ್ಥಾನದ ಅಧೀನದ ವೇದ ಅಧ್ಯಯನ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠ್ ವಿದ್ಯಾರ್ಥಿಯನ್ನು ನೆಲಕ್ಕೆ ತಳ್ಳಿ ಎಲ್ಲೆಂದರಲ್ಲಿ ಮನಬಂದಂತೆ ಒದ್ದಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.