ಮನೆ ಮನರಂಜನೆ “ನಾಗವಲ್ಲಿ ಬಂಗಲೆ” ಚಿತ್ರದ ಟೀಸರ್, ಪೋಸ್ಟರ್ ಬಿಡುಗಡೆ

“ನಾಗವಲ್ಲಿ ಬಂಗಲೆ” ಚಿತ್ರದ ಟೀಸರ್, ಪೋಸ್ಟರ್ ಬಿಡುಗಡೆ

0

ಕನ್ನಡದಲ್ಲಿ ಈಗ ಕಂಟೆಂಟ್ ಓರಿಯೆಂಟೆಡ್ ಚಿತ್ರಗಳದೇ ಕಾರುಬಾರು. ಅಂತಹ ವಿಭಿನ್ನ ಕಂಟೆಂಟ್ ಹೊಂದಿರುವ ಹಾರಾರ್ ಜಾನರ್ ಚಿತ್ರ “ನಾಗವಲ್ಲಿ ಬಂಗಲೆ”. ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆಯಾಯಿತು. ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಟೀಸರ್ ಹಾಗೂ ಪೋಸ್ಟರ್ ಅನಾವರಣ ಮಾಡಿದರು.

Join Our Whatsapp Group

 “ನಾಗವಲ್ಲಿ ಬಂಗಲೆ” ಚಿತ್ರದಲ್ಲಿ ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ ಈ ಆರು ಗುಣಗಳನ್ನು ಪ್ರತಿನಿಧಿಸುವ ಆರು ಮುಖ್ಯಪಾತ್ರಗಳಿರುತ್ತದೆ. ಆರು ಜನ  ಹುಡುಗಿಯರು ಈ ಆರು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಆರು ಪಾತ್ರಗಳು “ನಾಗವಲ್ಲಿ ಬಂಗಲೆ” ಪ್ರವೇಶಿಸಿದಾಗ ಏನೆಲ್ಲಾ ಆಗುತ್ತದೆ ಎಂಬುದೆ ಚಿತ್ರದ ಕಥಾ ಹಂದರ ಎಂದು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಜೆ.ಎಂ.ಪ್ರಹ್ಲಾದ್ ತಿಳಿಸಿದರು.‌

ಹಂಸ ವಿಷನ್ಸ್ ಲಾಂಛನದಲ್ಲಿ ನಾನು ಹಾಗೂ ನೇವಿ ಮಂಜು ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ನೆ.ಲ.ನರೇಂದ್ರ ಬಾಬು‌, ನೇವಿ ಮಂಜು ಹಾಗೂ ಅನೇಕ ನೂತನ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಫೆಬ್ರವರಿ 28 ರಂದು ಚಿತ್ರವನ್ನು ತೆರೆಗೆ ತರುತ್ತೇವೆ ಎಂದು ನಿರ್ಮಾಪಕ ನೆ.ಲ.ಮಹೇಶ್ ಹೇಳಿದರು.

ನಾಗವಲ್ಲಿ ಪಾತ್ರಧಾರಿ ‌ತೇಜಸ್ವಿನಿ, ಚಿತ್ರದಲ್ಲಿ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಸಿಮ್ರಾನ್, ಮಾನಸ, ರೂಪಶ್ರೀ, ಸುಷ್ಮ, ರಂಜಿತ, ಶ್ವೇತ‌,‌ ನಾಯಕ ಯಶ್ ಹಾಗೂ ನೃತ್ಯ ನಿರ್ದೇಶಕ ತ್ರಿಭುವನ್ ಮುಂತಾದವರು ಚಿತ್ರದ ಕುರಿತು ಮಾಹಿತಿ ನೀಡಿದರು.