ಬೆಂಗಳೂರು : ಎರಡು ವರ್ಷದ ಹಿಂದೆ ಮದುವೆಯಾಗಿದ್ದ, ಮಹಿಳಾ ಟೆಕ್ಕಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ನಗರದ ಎಸ್ಜಿ ಪಾಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಶಿಲ್ಪಾ ಎಂದು ಗುರುತಿಸಲಾಗಿದೆ.
ಶಿಲ್ಪಾ, ಪ್ರವೀಣ್ ಎಂಬಾತನನ್ನು 2 ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಪ್ರವೀಣ್ ವಿರುದ್ಧ ಮಹಿಳೆಯ ಕುಟುಂಬಸ್ಥರು, ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿ, ಆರೋಪಿಸಿದ್ದಾರೆ.
ಈ ಘಟನಾ ಸ್ಥಳಕ್ಕೆ ಎಸ್ಜಿ ಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಹಿಳೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರವೀಣ್ನನ್ನು ಬಂಧಿಸಿ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.















