ಮನೆ ರಾಷ್ಟ್ರೀಯ ದೆಹಲಿ ಏರ್‌ಪೋರ್ಟ್‌ ATCನಲ್ಲಿ ತಾಂತ್ರಿಕ ದೋಷ – ವಿಮಾನಗಳ ಹಾರಾಟ ವಿಳಂಬ

ದೆಹಲಿ ಏರ್‌ಪೋರ್ಟ್‌ ATCನಲ್ಲಿ ತಾಂತ್ರಿಕ ದೋಷ – ವಿಮಾನಗಳ ಹಾರಾಟ ವಿಳಂಬ

0

ನವದೆಹಲಿ : ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲರ್‌ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಇಂದು (ಶುಕ್ರವಾರ) ಬೆಳಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ ಎಂದು ವರದಿಗಳು ತಿಳಿಸಿವೆ.

ದೇಶದ ಜನನಿಬಿಡ ವಿಮಾನ ನಿಲ್ದಾಣವಾಗಿರುವ ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 1,500ಕ್ಕೂ ಹೆಚ್ಚು ವಿಮಾನಗಳು ಸಂಚಾರ ನಡೆಸುತ್ತವೆ. ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ಏರ್ ಟ್ರಾಫಿಕ್ ಕಂಟ್ರೋಲ‌ರ್ ವಿಮಾನಗಳ ಹಾರಾಟದ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪಡೆಯಲು ಸಾಧ್ಯವಾಗುತ್ತಿಲ್ಲ. ತಾಂತ್ರಿಕ ತಂಡ ಈಗಾಗಲೇ ದೋಷ ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.

ಲಭ್ಯವಿರುವ ಮಾಹಿತಿಯೊಂದಿಗೆ ಸಿಬ್ಬಂದಿ, ವಿಮಾನ ಮಾಹಿತಿಯನ್ನ ಬರಹದ ಮೂಲಕ ಸಿದ್ದಪಡಿಸುತ್ತಿರುವ ಕಾರಣ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ. ಹೀಗಾಗಿ ವಿಮಾನ ಹಾರಾಟ ವಿಳಂಬವಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಮಾಡಿದೆ.