ಬೆಂಗಳೂರು(Bengaluru): ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೊ ರೈಲು ಮಾರ್ಗದಲ್ಲಿ(ನೇರಳೆ ಮಾರ್ಗ) ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಒಂದೇ ಟ್ರ್ಯಾಕ್ ನಲ್ಲಿ 25ರಿಂದ 30 ನಿಮಿಷಕ್ಕೊಂದು ರೈಲು ಸಂಚರಿಸುತ್ತಿವೆ. ತಾಂತ್ರಿಕ ದೋಷ ಸರಿಪಡಿಸಲು ನಿರ್ವಹಣಾ ತಂಡ ಪರಿಶೀಲನೆ ನಡೆಸುತ್ತಿದೆ. ಶೀಘ್ರದಲ್ಲೇ ಸಮಸ್ಯೆ ಸರಿಯಾಗಲಿದ್ದು, ರೈಲುಗಳ ಸಂಚಾರ ಸಹಜವಾಗಲಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ರೈಲು ಸಂಚಾರದಲ್ಲಿ ವ್ಯತ್ಯಯ ಆಗಿರುವುದರಿಂದ ಮೈಸೂರು ರಸ್ತೆಯಿಂದ ಕೆಂಗೇರಿ ತನಕದ ನಿಲ್ದಾಣಗಳಲ್ಲಿ ಪ್ರಯಾಣಿಕರು ರೈಲಿಗಾಗಿ ಕಾಯುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ತೆರಳಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.