ಮನೆ ಕಾನೂನು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು

0

ತೆಲಂಗಾಣ: ಪೂರ್ವಭಾಗದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಗಂಗಾವತಿಯ ಮಾಜಿ ಬಿಜೆಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅಕ್ರಮ ಗಣಿಗಾರಿಕೆ ಸಂಬಂಧ ಒಬುಲಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ಸಂಬಂಧಿಸಿದ ಪ್ರಕರಣವು ಸುಮಾರು 16 ವರ್ಷಗಳ ಹಿಂದೆಯೇ ಸಿಬಿಐಗೆ ತಲುಪಿದ್ದು, ತನಿಖೆಯ ನಂತರ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಮೇ 6 ರಂದು ಗಾಲಿ ಜನಾರ್ಧನ ರೆಡ್ಡಿ ಸೇರಿದಂತೆ ನಾಲ್ವರ ವಿರುದ್ಧ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಪ್ರಕರಣದಲ್ಲಿ ಅವರ ಸಂಬಂಧಿ ಹಾಗೂ ಒಎಂಸಿ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಕೂಡ ಶಿಕ್ಷೆಗೆ ಒಳಗಾಗಿದ್ದರು.

ಪ್ರಕರಣ ದಾಖಲಾಗುವ ಸಂದರ್ಭದಲ್ಲಿ ಆಂಧ್ರಪ್ರದೇಶದ ಗೃಹಸಚಿವರಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ. ಕೃಪಾನಂದಂ ವಿರುದ್ಧವೂ ಆರೋಪಗಳು ಕೇಳಿಬಂದಿದ್ದರೂ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅವರಿಗೆ ಖುಲಾಸೆ ನೀಡಲಾಗಿತ್ತು. ಆದರೆ ಗಾಲಿ ರೆಡ್ಡಿಯವರ ವಿರುದ್ಧ ಸಾಕ್ಷ್ಯಾಧಾರಗಳು ಬಲವಾಗಿ ಕಂಡುಬಂದ ಕಾರಣದಿಂದ ಅವರು ಶಿಕ್ಷೆಗೆ ಗುರಿಯಾದರು.