ಮೈಸೂರು: ಮೈಸೂರು ತಾಲೂಕಿನ ಕಸಬಾ ಹೋಬಳಿಯ ಸಿದ್ದಲಿಂಗಪುರ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಪ್ರವರ್ಗ ‘ಸಿ’ ಸಂಸ್ಥೆಯಾಗಿದ್ದು, ಪ್ರಸ್ತುತ ಸದರಿ ದೇವಾಲಯದ ಪುನರ್ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.
ಆದ್ದರಿಂದ ಡಿಸೆಂಬರ್ 18 ರಂದು ದೇವಾಲಯದಲ್ಲಿ ಷಷ್ಠಿ ಜಾತ್ರಾ ಮಹೋತ್ಸವ ಆಚರಣೆಯನ್ನು ರದ್ದುಪಡಿಸಿದೆ. ದೇವಾಲಯದ ರೂಢಿ ಸಂಪ್ರದಾಯಗಳಿಗೆ ಅನುಗುಣವಾಗಿ ದೇವಾಲಯದ ಧಾರ್ಮಿಕ ಆಚರಣೆಗೆ ಧಕ್ಕೆಯಾಗದಂತೆ ಪೂಜಾ ಕೈಂಕರ್ಯಗಳನ್ನು ದೇವಾಲಯದ ಒಳ ಆವರಣದಲ್ಲಿ ನಡೆಸಲು ಅನುಮತಿ ನೀಡಲಾಗಿದೆ ಎಂದು ಮೈಸೂರು ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.