ಮನೆ ರಾಜ್ಯ ಕಾಪುವಿನಲ್ಲಿ ಟೆಂಪೋ ಪಲ್ಟಿ – ಐವರು ಕಾರ್ಮಿಕರು ಸಾವು

ಕಾಪುವಿನಲ್ಲಿ ಟೆಂಪೋ ಪಲ್ಟಿ – ಐವರು ಕಾರ್ಮಿಕರು ಸಾವು

0

ಉಡುಪಿ : ಜಿಲ್ಲೆಯ ಕಾಪು ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಪಲ್ಟಿಯಾಗಿ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮೃತರು ಉತ್ತರ ಪ್ರದೇಶ ಮೂಲದವರು. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಪುವಿನಿಂದ ಉಡುಪಿಗೆ ಡೆಕೊರೇಟಿಂಗ್ ಸಾಮಗ್ರಿಗಳನ್ನು ಟೆಂಪೋದಲ್ಲಿ ಸಾಗಿಸಲಾಗುತ್ತಿತ್ತು.

ವೇಗವಾಗಿ ಚಲಿಸುತ್ತಿದ್ದ ಟೆಂಪೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದರು. ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ.

ವಾಹನದಲ್ಲಿ 12 ಮಂದಿ ಸಂಚರಿಸುತ್ತಿದ್ದರು. ಗಾಯಾಳುಗಳನ್ನು ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಡಿವೈಡರ್ ಹಾರಿ ಸರ್ವಿಸ್ ರಸ್ತೆ ಕಡೆಗೆ ಟೆಂಪೋ ಬಿದ್ದಿದೆ.