ಮನೆ ಸುದ್ದಿ ಜಾಲ ಕೆ.ಎಸ್ಆ.ರ್.ಟಿ.ಸಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

ಕೆ.ಎಸ್ಆ.ರ್.ಟಿ.ಸಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

0

ಮೈಸೂರು:  ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.

ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಎನ್ನುವ  ಬಗ್ಗೆ ಮಾಹಿತಿ ಲಭ್ಯವಾಗಿದೆ.

ಜೀಪ್ ಹೆಚ್.ಡಿ ಕೋಟೆಯಿಂದ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹುಣಸೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಮೈಸೂರಿನಲ್ಲಿ ಇಬ್ಬರು ಸರಗಳ್ಳರ ಬಂಧನ: 1.20 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಮುಂದಿನ ಲೇಖನಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ನಿರ್ವಹಿಸಿದ್ದ ನ್ಯಾಷನಲ್ ಸಂಸ್ಥೆ ಮೇಲೆ ಇಡಿ ದಾಳಿ