ಹಾವೇರಿ : ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಮನಸಾಬ್ ಕೆರಿಮತ್ತಿಹಳ್ಳಿ 65 ವರ್ಷ, ಮಾಬುಸಾಬ್ ದೊಡ್ಡಗುಬ್ಬಿ 65 ವರ್ಷ, ನಿಂಗಮ್ಮ ಜಿಗಳೇರ್ (70) ಮೃತ ದುರ್ವೈವಿಗಳು.
ಮೃತರು ದಾವಣಗೆರೆ ಜಿಲ್ಲೆ ಮಲೇಬೆನ್ನೂರಿನ ನಿವಾಸಿಗಳು ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಅಂಬ್ಯುಲೆನ್ಸ್ ಮೂಲಕ ಗಾಯಾಳನ್ನು ರಾಣೇಬೆನ್ನೂರು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಟ್ರಾಕ್ಟರ್ ಟ್ರೈಲರ್ ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ಟ್ರಾಕ್ಟರ್ ಟ್ರೈಲರ್ ಹಿಂಬದಿ ಯಾವುದೇ ಲೈಟ್ ಇರುವುದಿಲ್ಲ. ಹೀಗಾಗಿ ಕತ್ತಲಲ್ಲಿ ಬೇಗ ಅದು ಕಾಣಿಸಲ್ಲ. ಪರಿಣಾಮ ವೇಗವಾಗಿ ಬಂದ ಟಾಟಾ ಏಸ್ ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರೈಲರ್ ಗೆ ಗುದ್ದಿದೆ ಎಂದು ತಿಳಿದುಬಂದಿದೆ.














