ಮನೆ ಅಪರಾಧ ತುಮಕೂರಿನಲ್ಲಿ ಭೀಕರ ಅಪಘಾತ: ನವದಂಪತಿ ಸ್ಥಳದಲ್ಲೇ ಸಾವು

ತುಮಕೂರಿನಲ್ಲಿ ಭೀಕರ ಅಪಘಾತ: ನವದಂಪತಿ ಸ್ಥಳದಲ್ಲೇ ಸಾವು

0

ತಮಕೂರು: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ.

ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸಾಫ್ಟ್ ವೇರ್ ಟೆಕ್ಕಿ ಜೋಡಿ ಮೃತಪಟ್ಟಿದ್ದಾರೆ.

ಮೃತರನ್ನು ಅರಸಿಕೆರೆ ಮೂಲದ ರಘು(35) ಮತ್ತು ತಿಗಳನಹಳ್ಳಿ ಮೂಲದ ಅನುಷಾ(28 ) ಎಂದು ಗುರುತಿಸಲಾಗಿದೆ.

ರಘು ಮತ್ತು ಅನುಷಾ ದಂಪತಿ ಇಬ್ಬರೂ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಸಾಫ್ಟ್ ವೇರ್ ಎಂಜಿನಿಯರ್’ಗಳಾಗಿದ್ದು ಸಂಬಂಧಿಕರ ಮದುವೆಗೆಂದು ಬಳ್ಳಾರಿ ಕಡೆಗೆ ತೆರಳುತ್ತಿದ್ದಾಗ ಹುಳಿಯಾರ್ ಗೇಟ್ ಬಳಿ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಲಿಂಗಾಯಿತ ಪ್ರತ್ಯೇಕ ಧರ್ಮ ಸಾಂವಿಧಾನಿಕ ಮಾನ್ಯತೆಗೆ ಕೇಂದ್ರಕ್ಕೆ ಮತ್ತೊಮ್ಮೆ ಶಿಫಾರಸ್ಸು ಮಾಡಿ: ಚನ್ನಬಸವಾನಂದ ಸ್ವಾಮೀಜಿ
ಮುಂದಿನ ಲೇಖನದಂಪತಿಗಳ ನಡುವಿನ ನಿದ್ರೆಯ ವಿಚ್ಛೇದನ ಎಂದರೇನು ಗೊತ್ತಾ?