ಮನೆ ಅಪರಾಧ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಯುವಕರು ಸ್ಥಳದಲ್ಲೇ ಸಾವು

0

ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ಕೆ.ಆರ್. ಮಾರುಕಟ್ಟೆ ಫ್ಲೈಓವರ್ ನಲ್ಲಿ ಸೋಮವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ದುಃಖದ ಘಟನೆ ವರದಿಯಾಗಿದೆ.

ಪೀಕ್ ಅವರ್‌ನಲ್ಲಿ ವಾಹನ ಸಂಚಾರ ತೀವ್ರವಾಗಿರುವ ವೇಳೆ, ಎರಡು ಬೈಕ್‌ಗಳು ಪರಸ್ಪರ ಡಿಕ್ಕಿಯಾಗಿ ಭಯಾನಕ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆಕಾಶ್ ಮತ್ತು ಅಫ್ಜಲ್ ಎಂಬ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ತೀವ್ರತೆ ಎಷ್ಟಿತೆಂದರೆ ಬೈಕ್‌ಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಈ ಅಪಘಾತದಲ್ಲಿ ಇನ್ನಿಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.