ಮನೆ ಸ್ಥಳೀಯ ಮೈಸೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರ ದುರ್ಮರಣ

ಮೈಸೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರ ದುರ್ಮರಣ

0

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಜೆ.ಪಿ. ಹುಂಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಅಕಾಲಿಕವಾಗಿ ಪ್ರಾಣ ಕಳೆದುಕೊಂಡಿರುವ ದುರಂತ ಘಟನೆ ನಡೆದಿದೆ.

ಮಂಗಳವಾರ ಮಧ್ಯಾಹ್ನದ ವೇಳೆ ನಂಜನಗೂಡು ತಾಲೂಕಿನ ಜೆ.ಪಿ. ಹುಂಡಿ ಬಳಿ ಬೈಕ್ ಮತ್ತು ಲಾರಿ ನಡುವೆ ನೇರ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಹಂಚಿಪುರ ಗ್ರಾಮದ ನಿವಾಸಿಗಳಾಗಿದ್ದು, ಘಟನೆಯಲ್ಲಿ ಮೃತರಾದವರನ್ನು ಚೆನ್ನಮಲ್ಲಮ್ಮ, ಮಗಳು ರೂಪ ಮತ್ತು ಅವರ ಅಳಿಯ ಚಿನ್ನಸ್ವಾಮಿ ಎಂದು ಗುರುತಿಸಲಾಗಿದೆ.

ಮೃತರು ಮಾದನಹಳ್ಳಿಯಿಂದ ತಮ್ಮ ಊರಾದ ಹಂಚಿಪುರಕ್ಕೆ ತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅಪಘಾತಕ್ಕೀಡಾದ ಲಾರಿ ಹುಲ್ಲಹಳ್ಳಿ ಗ್ರಾಮದಿಂದ ಸಂಗಮದ ಕಡೆಗೆ ಸಾಗುತ್ತಿತ್ತು. ಓರ್ವ ಮಹಿಳೆ, ಅವರ ಮಗಳು ಹಾಗೂ ಅಳಿಯನೊಂದಿಗೆ ಪ್ರಯಾಣಿಸುತ್ತಿದ್ದ ಬೈಕ್‍ಗೆ ವಿರುದ್ದ ದಿಕ್ಕಿನಲ್ಲಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.