ಭೀಕರ ರಸ್ತೆ ಅಪಘಾತದಲ್ಲಿ ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ ಹೊಂದಿದ್ದಾರೆ.
ಅವರಿಗೆ ಕೇವಲ 23 ವರ್ಷ ಆಗಿತ್ತು. ‘ಧರ್ತಿಪುತ್ರ ನಂದಿನಿ’ ಧಾರಾವಾಹಿ ಮೂಲಕ ಅವರು ಗಮನ ಸೆಳೆದಿದ್ದರು.
ಮುಂಬೈನ ಹಿಲ್ ಪಾರ್ಕ್ ರಸ್ತೆಯಲ್ಲಿ ಶುಕ್ರವಾರ (ಜನವರಿ 17) ಮಧ್ಯಾಹ್ನ 3.15ಕ್ಕೆ ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಟ್ರಕ್ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಇದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಆಗಲೇ ಅವರು ನಿಧನ ಹೊಂದಿದ್ದರು. ಸದ್ಯ ಟ್ರಕ್ ಹಾಗೂ ಅದರ ಚಾಲಕ ಪೊಲೀಸ್ ಕಸ್ಟಡಿಯಲ್ಲಿ ಇದ್ದಾರೆ.
ಅಂಬೋಲಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Saval TV on YouTube